ಕಡಬ: ಆರೋಗ್ಯ ತಪಾಸಣೆಗೆ ಬಾರದ ವೈದ್ಯರು | ಕಾದು ಸುಸ್ತಾದ ಕಾರ್ಮಿಕರು
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪೆರಾಬೆ ಗ್ರಾಮ ಪಂಚಾಯತ್ ನಲ್ಲಿ ಜೂನ್ 2ರಂದು ಕಾರ್ಮಿಕ ಇಲಾಖೆ ಮತ್ತು ಪೆರಾಬೆ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ ಮಂಗಳೂರು ಇಲ್ಲಿಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ 10 ಗಂಟೆಗೆ ತಜ್ಞ ವೈದ್ಯರ ತಂಡ ಬರಬೇಕಿತ್ತು. ಆದರೆ ವೈದ್ಯರ ಪತ್ತೆಯೇ ಇರಲಿಲ್ಲ. ಕಾರ್ಮಿಕ ಇಲಾಖೆಯಿಂದ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ನಡೆಸಲು ನಿಯೋಜಿಸಿದ ತಂಡವನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಪಿ.ಡಿ.ಓ., ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಫೋನ್ ಕರೆಯನ್ನು ಸ್ವೀಕರಿಸಿಲ್ಲ. ಈ ಬಗ್ಗೆ ಕಾರ್ಮಿಕ ಇಲಾಖೆಗೆ ಸಂಪರ್ಕಿಸಿ ವಿಷಯ ತಿಳಿಸಿದಾಗ ತಂಡವನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಅವರು ಕೂಡ ನಮ್ಮ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಹೇಳಿದ್ದಾರೆ.
ಇದರಿಂದ ಆರೋಗ್ಯ ತಪಾಸಣೆಗಾಗಿ ಬಂದ ಸಾರ್ವಜನಿಕರು ಬೆಳಿಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾದು ಸುಸ್ತಾಗಿ ಬೇಸತ್ತ ಜನರು ಕಾರ್ಯಕ್ರಮ ಆಯೋಜಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮ ಆಯೋಜನೆ ಬಗ್ಗೆ ಬೇಜವಾಬ್ದಾರಿಯ ವರ್ತಿಸಿದ ಬಗ್ಗೆ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಅಸಮಾಧಾನ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪುಷ್ಪ ಸಿನಿಮಾ ಸ್ಟೈಲ್ ನಲ್ಲಿ ರಕ್ತ ಚಂದನ ಸಾಗಾಟ: ಎಮ್ಮೆಯಿಂದಾಗಿ ಸಿಕ್ಕಿಬಿದ್ದ ಕಳ್ಳರು!
ತನ್ನನ್ನು ತಾನೇ ಮದುವೆಯಾಗಲು ಮುಂದಾದ ಯುವತಿ: ಜೂನ್ 11ರಂದು ಮದುವೆ!