ನನ್ನ ವಿರುದ್ಧದ ಆರೋಪ ಸಾಬೀತಾದರೆ, ಸಾರ್ವಜನಿಕವಾಗಿ ನೇಣಿಗೇರುತ್ತೇನೆ | ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಹೇಳಿಕೆ
ಕೋಲ್ಕತ್ತಾ: ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಆರೋಪ ಸಾಬೀತಾದರೆ, ನಾನು ಸಾರ್ವಜನಿಕವಾಗಿ ನೇಣಿಗೆ ಶರಣಾಗುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.
ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹೊರಟಿದ್ದ ಅವರು ಕೋಲ್ಕತ್ತಾ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳಿಗೆ ಈ ಹೇಳಿಕೆ ನೀಡಿದ್ದು, ತನ್ನ ಮೇಲೆ ಬಂದಿರುವ ಆರೋಪವನ್ನು ಬಿಜೆಪಿ ಸಾಬೀತು ಮಾಡಿದರೆ, ಸಾರ್ವಜನಿಕವಾಗಿ ನೇಣಿಗೇರುವುದಾಗಿ ಅವರು ಹೇಳಿದ್ದಾರೆ.
ಬಿಜೆಪಿಯು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸೋತಿದ್ದರಿಂದಾಗಿ ರಾಜಕೀಯ ವೈಷಮ್ಯ ಮಾಡುತ್ತಿದೆ. ನಾನು ಅಕ್ರಮವಾಗಿ 10 ಪೈಸೆಯನ್ನೂ ವರ್ಗಾವಣೆ ಮಾಡಿಲ್ಲ. ಯಾವುದೇ ಕೇಂದ್ರದ ಏಜೆನ್ಸಿ, ನಾನು 10 ಪೈಸೆ ಅಕ್ರಮ ವರ್ಗಾವಣೆ ಮಾಡಿರುವುದನ್ನು ಸಾಬೀತು ಮಾಡಿದರೆ, ನಾನೇ ಮುಂದೆ ಬಂದು ಸಾರ್ವಜನಿಕವಾಗಿ ನೇಣಿಗೆ ಶರಣಾಗುತ್ತೇನೆ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸುದ್ದಿಗಳು…
ವಿವಾದಿತ ಕೃಷಿ ಕಾಯ್ದೆ ವಾಪಸ್ ಪಡೆಯದಿದ್ದರೆ ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತೇವೆ | ರೈತ ನಾಯಕರಿಂದ ಎಚ್ಚರಿಕೆ
ಕಾಂಗ್ರೆಸ್ ನವರು ಚಳುವಳಿ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ | ಸಿ.ಟಿ.ರವಿ ಹೇಳಿಕೆ
ಹಾರ, ತುರಾಯಿ ಸನ್ಮಾನ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ! | ಆದೇಶ ಪಾಲಿಸಬೇಕಾದವರು ಯಾರು?
ದೆಹಲಿ ಪೊಲೀಸ್ ಸಬಿಯಾ ಸೈಫಿ ಸಾಮೂಹಿಕ ಅತ್ಯಾಚಾರ, ಬರ್ಬರ ಹತ್ಯೆ | 50 ಬಾರಿ ಚುಚ್ಚಿದರು, ಅಂಗಾಂಗ ಕತ್ತರಿಸಿದರು!
ಕುಟುಂಬ ಸಂಘಟನೆಯ ಬದಲು ಪಕ್ಷ ಸಂಘಟನೆ ಧ್ಯೇಯವಾಗಿರಲಿ | ಬಿ.ವೈ.ವಿಜಯೇಂದ್ರಗೆ ಯತ್ನಾಳ್ ಟಾಂಗ್