ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ

chamarajanagara crime
02/06/2023

ಚಾಮರಾಜನಗರ: ಮಲೈಮಹದೇಶ್ವರನ ಸನ್ನಿಧಿಯಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವರನ್ನು ಅಬಕಾರಿ ಇಲಾಖೆ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದ ಹೊಸಕೊಳದ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಪುಟ್ಟಮ್ಮ ಎಂಬ ಮಹಿಳೆಯನ್ನು ಬಂಧಿಸಿ, ಅವರಿಂದ 8.640 ಲೀ ಮದ್ಯ ವಶಪಡಿಸಿಕೊಂಡಿದ್ದಾರೆ.

ಮಲೈಮಹದೇಶ್ವರ ಬೆಟ್ಟದಲ್ಲಿ ಜೂಜಾಟ ಹಾಗೂ ಮದ್ಯದ ಮಾರಾಟದ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version