ಬಚ್ಚಲು ಮನೆಗೆ ಕ್ಯಾಮರಾ ಇಟ್ಟ ಸಂಘಪರಿವಾರ ಕಾರ್ಯಕರ್ತ ಎನ್ನಲಾದ ಯುವಕನ ಬಂಧನ!
ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ.
ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಈತ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ ಎಂದು ತಿಳಿದು ಬಂದಿದೆ.
ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಘಟನೆ ನಡೆದಿದೆ. ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ.
ಈ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಥಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಹಿಳೆ ಸ್ನಾನ ಮಾಡುವ ವೀಡಿಯೊ ಮಾಡಿದ್ದ ಮೊಬೈಲ್ ಸಹಿತ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw