ಗಾಂಜಾ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು ಉತ್ತರ ವಿಭಾಗದ ಆರ್.ಎಂ.ಸಿ.ಯಾರ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 300 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಆಗಸ್ಟ್ 28 ರ ಸಂಜೆ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿರುವಾಗ ಭಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ, ಲಾರಿ, ಸ್ಟ್ಯಾಂಡ್ ಬಳಿ ಬರುತ್ತಿದ್ದ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ 10 ಚಾಕೋಲೇಟ್ ತುಂಬಿದ ಬಿಳಿ ಚೀಲಗಳಿದ್ದವು. ಆಟೋ ರೀಕ್ಷಾದಲ್ಲಿನ ವ್ಯಕ್ತಿಯನ್ನು ವಿಚಾರಿಸಿದಾಗ ಆತನು ಗಾಂಜಾ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಪ್ಪೊಪ್ಪಿಕೊಂಡ ಮೇರೆಗೆ ಆತನನ್ನು ಮಾಲು ಸಮೇತ ವಶಕ್ಕೆ ಪಡೆಯಲಾಗಿದೆ.
ಆರೋಪಿಯ ವಿರುದ್ಧ ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ ಆತನ ವಶದಿಂದ 300 ಕೆ.ಜಿ. ಗಾಂಜಾಮತ್ತು 1 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿನ ಆರೋಪಿಯನ್ನು ಹೆಚ್ಚಿನ ತನಿಖೆಗೊಳಪಡಿಸಿದಾಗ, ಆರೋಪಿಯು ಉತ್ತರ ಪ್ರದೇಶದ ಖಾನಪೂರದಲ್ಲಿನ ವ್ಯಕ್ತಿಯೊಬ್ಬರಿಂದ ಟಾನ್ಸ್‌ಪೋರ್ಟ್ ಮೂಲಕ ಚಾಕೋಲೇಟ್ ರೂಪದಲ್ಲಿ ಗಾಂಜಾ ಮಿಶ್ರಿತ ಚಾಕೋಲೇಟ್‌ಗಳನ್ನು ತರಿಸಿಕೊಂಡು ಬೆಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದಾಗಿ ತಿಳಿಸಿರುತ್ತಾನೆ.
0ಈ ಪ್ರಕರಣ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. ಪ್ರಕರಣದಲ್ಲಿ ಶಿವ ಪ್ರಕಾಶ್ ದೇವರಾಜು ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತ ಉತ್ತರ ವಿಭಾಗ ರವರ ಮಾರ್ಗದರ್ಶನದಲ್ಲಿ ಸದಾನಂದ ಎ ತಿಪಣ್ಣವರ್, ಎಸಿಪಿ, ಪೀಣ್ಯ ಉಪ ವಿಭಾಗ ಮತ್ತು ಸುರೇಶ್.ಪಿ ಪೊಲೀಸ್ ಇನ್ಸ್‌ಪೆಕರ್, ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ
ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.