ಮಾದಕ ವಸ್ತು ಹೊಂದಿದ್ದ ವ್ಯಕ್ತಿಯ ಬಂಧನ: 6.35 ಲಕ್ಷದ ಸೊತ್ತುಗಳ ವಶ

ಸಿಸಿಬಿ ಪೊಲೀಸರು ಮಂಗಳೂರಲ್ಲಿ ಮಾದಕ ವಸ್ತು ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾದಕ ವಸ್ತುವಾದ ಎಂಡಿಎಂಎಯನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಎಂಡಿಎಂಎಯನ್ನು ಕಾರಿನಲ್ಲಿಟ್ಟುಕೊಂಡು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಹೊಂದಿದ ಮಹಮ್ಮದ್ ಆರೀಫ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, KA-19-MH-3023 ಮಾರುತಿ ಅಲ್ಟೋ800 ಕಾರು, ಮೊಬೈಲ್ ಫೋನ್-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,35,500/-ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಯ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw