ಮ್ಯಾನೇಜರ್ ನನ್ನು ಅಪಹರಿಸಿ ಮಾಲಿಕನಿಗೆ ಹಣದ ಬೇಡಿಕೆ ಇಟ್ಟ ಆರೋಪಿಗಳ ಬಂಧನ
ಬೆಂಗಳೂರು: “ಹಣಕ್ಕೆ ಬೇಡಿಕೆಯಿಟ್ಟು ಅಪಹರಣ ಮಾಡಿದ ಆರೋಪಿಗಳನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಜೂನ್ 26ರಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಂಚನ ಪುರ ಕ್ರಾಸ್‌ನಲ್ಲಿರುವ ಸಂತೋಷ್ ಸೋಶಿಯಲ್ ಸರ್ವೀಸ್ ಸೊಸೈಟಿ(ರಿಯಾಬಿಲಿಟೇಷನ್) ಸೆಂಟರ್ ನ ಮಾಲೀಕನಿಗೆ ಮೊಬೈಲ್ ಮುಖಾಂತರ ಧಮ್ಕಿ ಹಾಕಿ 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದು, ಮಾಲೀಕರು ಹಣ ಕೊಡಲು ನಿರಾಕರಿಸಿದ್ದರು.
ನಂತರ ರಿಯಾಬಿಲಿಟೇಷನ್ ಸೆಂಟರ್ ಹತ್ತಿರ ಬಂದ 7–8 ಜನ ಆಸಾಮಿಗಳು ಮ್ಯಾನೇಜರ್ ಬಳಿ, ಮಾಲೀಕರ ಬಗ್ಗೆ ವಿಚಾರಿಸಿದ್ದು, ಮ್ಯಾನೇಜರ್ ರವರು ಮಾಲೀಕರು ಇಲ್ಲವೆಂದು ತಿಳಿಸಿದ ಮೇರೆಗೆ ಸದರಿ ಗುಂಪು ಮ್ಯಾನೇಜರ್ ನನ್ನೇ ಅಪಹರಣ ಮಾಡಿ ಮಾಲೀಕನಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಪ್ರಕರಣ ದಾಖಲಿಸಿಕೊಂಡ ಜ್ಞಾನಭಾರತಿ ಪೊಲೀಸ್ ಠಾಣೆಯವರು ಕಾರ್ಯಪ್ರವೃತ್ತರಾಗಿ, ಕ್ಷಿಪ್ತ ಕಾರ್ಯಾಚರಣೆ ನಡೆಸಿ ನಂಜನಗೂಡು ಬಸ್ ನಿಲ್ದಾಣದ ಬಳಿ ಅಪಹರಣಕ್ಕೊಳಗಾದ ವ್ಯಕ್ತಿ ಹಾಗೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ರವರಾದ ಡಾ.ಲಕ್ಷ್ಮಣ ನಿಂಬರಗಿ ರವರ ಸೂಕ್ತ ಮಾರ್ಗದರ್ಶನದಲ್ಲಿ, ಕೆಂಗೇರಿ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ರವರಾದ ಹೆಚ್.ಎಸ್.ಪರಮೇಶ್ವರ್ ರವರ ನಿರ್ದೇಶನದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಮಣಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಕರ್ತವ್ಯವನ್ನು ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಮತ್ತು ಅಪರ ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw