ಶ್ರೀರಾಮನ ಫ್ಲೆಕ್ಸ್ ಹರಿದ ಇಬ್ಬರು ಕಿಡಿಗೇಡಿಗಳ ಬಂಧನ

17/01/2024
ಕೋಲಾರ: ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಕೋಲಾರದ ಮುಳಬಾಗಿಲಿನಲ್ಲಿ ಅಳವಡಿಸಲಾಗಿದ್ದ ಶ್ರೀರಾಮನ ಫ್ಲೆಕ್ಸ್ ಗೆ ಬ್ಲೇಡ್ ಹಾಕಿದ ಘಟನೆಗೆ ಸಂಬಂಧಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀರಾಮನ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಕೊಯ್ದು ಹಾನಿ ಮಾಡಿದ್ದರು. ಈ ಘಟನೆಯ ಬಳಿಕ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ನಡುವೆ ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾದ ಮುಳಬಾಗಿಲು ಪೊಲೀಸರು ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸದ್ಯ ಬಂಧಿತ ಆರೋಪಿಗಳ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಿ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗೃತಾ ಕ್ರಮಕೈಗೊಂಡಿದ್ದಾರೆ.