ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಅರ್ಜಿ: ಎಲ್ಲಾ ಅರ್ಜಿಗಳು ಸುಪ್ರಿಂ ಕೋರ್ಟ್ ಗೆ ವರ್ಗಾವಣೆ

ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವ ವಿಷಯದ ಕುರಿತು ದೇಶದಾದ್ಯಂತ ವಿವಿಧ ಹೈಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಒಟ್ಟುಗೂಡಿಸಿ ತನಗೇ ವರ್ಗಾಯಿಸಿಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಹಾಗೂ ಜೆ.ಪಿ. ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು, ಫೆ. 15ರೊಳಗೆ ಎಲ್ಲಾ ಅರ್ಜಿಗಳಿಗೆ ಜಂಟಿ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು ಮತ್ತು ಎಲ್ಲಾ ಅರ್ಜಿಗಳನ್ನು ಮಾರ್ಚ್ನಲ್ಲಿ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.
ಒಂದು ವೇಳೆ ಯಾವುದೇ ಅರ್ಜಿದಾರರು ವಿಚಾರಣೆಗೆ ನ್ಯಾಯಾಲಯಕ್ಕೆ ಭೌತಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ವರ್ಚುವಲ್ ವೇದಿಕೆಯ ಮೂಲಕವೂ ಹಾಜರಾಗಬಹುದು ಎಂದೂ ನ್ಯಾಯಪೀಠವು ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw