ದಕ್ಷಿಣ ಕನ್ನಡ ಬಿಜೆಪಿಗೆ ಶಾಕ್: ಲೋಕಸಭಾ ಚುನಾವಣೆಗೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತ

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಇತ್ತೀಚೆಗೆ ಸಂಘಪರಿವಾರದ ನಾಯಕ ಎಂದು ಬಿಂಬಿತವಾಗುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರು ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಈಗಾಗಲೇ ಬಿಜೆಪಿ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ., ವಿಜಯೇಂದ್ರ, ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರ ಜೊತೆಗೆ ಮಾತುಕತೆ ನಡೆದಿತ್ತು. ಎಲ್ಲರೂ ಸಕಾರಾತ್ಮಕ ಸ್ಪಂದನೆ ನೀಡಿದ್ದರು. ಆದರೆ, ಈವರೆಗೆ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಪುತ್ತಿಲ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮಂಡಲ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದೆವು. ಆದರೆ ಅದು ಸಫಲವಾಗಿಲ್ಲ, ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದು ಪ್ರಸನ್ನ ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪರಿವಾರದ ವಕ್ತಾರ ಕೃಷ್ಣ ಉಪಾದ್ಯಾಯ, ಉಪಾಧ್ಯಕ್ಷ ಮಹೇಂದ್ರ ವರ್ಮ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕೋಡಿಬೈಲು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth