ಕೇಸರಿ ಪಡೆ ಸೋಲಿಸಲು ಆದ್ಮಿ ಸಾಥ್: ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇನೆ ಎಂದ ಎಎಪಿ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಸಾಡಲು ಕಾರ್ಯತಂತ್ರ ರೂಪಿಸಲು ಬೆಂಗಳೂರಲ್ಲಿ ಸೋಮವಾರ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸುವುದಾಗಿ ಎಎಪಿ ಘೋಷಿಸಿದೆ. ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿಯ ಎಎಪಿ ಸರ್ಕಾರವನ್ನು ಬೆಂಬಲಿಸಲು ಕಾಂಗ್ರೆಸ್ ಒಪ್ಪಿದ ಬೆನ್ನಲ್ಲೇ ಈ ನಿರ್ಧಾರ ಪ್ರಕಟಿಸಲಾಗಿದೆ. ಇದಕ್ಕೂ ಮುನ್ನ ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರವನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದರು.
ಅಂದಹಾಗೇ ಎಎಪಿಯ ರಾಜಕೀಯ ಕ್ರಿಯಾ ಸಮಿತಿ ಸಭೆ ಇಂದು ನಡೆಯಿತು. ಪ್ರತಿಯೊಂದು ಅಂಶವನ್ನು ವಿವರವಾಗಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯು ಸ್ಪಷ್ಟವಾಗಿ ರಾಷ್ಟ್ರವಿರೋಧಿಯಾಗಿದೆ ಎಂದು ಎಎಪಿ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್‌ನಿಂದ ತೊಡಗಿ ಆರ್‌ಜೆಡಿ, ಜೆಡಿಯು, ಎನ್‌ಸಿಪಿ, ಸಮಾಜವಾದಿ ಪಕ್ಷ, ಉದ್ಧವ್ ಠಾಕ್ರೆ ಅವರ ಶಿವಸೇನೆ ಎಲ್ಲರೂ ಈ ದೇಶವಿರೋಧಿ ಸುಗ್ರೀವಾಜ್ಞೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಇದನ್ನು ಸೋಲಿಸಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ರಾಘವ್ ಹೇಳಿದ್ದಾರೆ.
ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಸಮಾವೇಶದ ನಂತರ ಸುಗ್ರೀವಾಜ್ಞೆ ವಿಚಾರದಲ್ಲಿ ದೆಹಲಿ ಸರ್ಕಾರ ಮತ್ತು ಎಎಪಿಯನ್ನು ಬೆಂಬಲಿಸದ ಪ್ರತಿಪಕ್ಷಗಳ ವಿರುದ್ಧ ಕೇಜ್ರಿವಾಲ್ ಪಕ್ಷ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್ ಹೊರತುಪಡಿಸಿ ಎಲ್ಲಾ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸುಗ್ರೀವಾಜ್ಞೆ ವಿರುದ್ಧ ಹೋರಾಟಕ್ಕೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡಿದ್ದವು. ಇದೀಗ ಕಾಂಗ್ರೆಸ್ ಸಹ ಅದೇ ಹಾದಿ ಹಿಡಿದಿದ್ದು, ಎಎಪಿ ಕೂಡ ಪ್ರತಿಪಕ್ಷಗಳ ಒಕ್ಕೂಟ ಸೇರಲು ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw