ಡ್ರಗ್ಸ್ ಪ್ರಕರಣ: ನಟ ಶಾರುಕ್ ಖಾನ್ ಪುತ್ರ ಆರ್ಯನ್‌ ಖಾನ್‌ ಗೆ ಜಾಮೀನು - Mahanayaka
6:28 PM Wednesday 11 - December 2024

ಡ್ರಗ್ಸ್ ಪ್ರಕರಣ: ನಟ ಶಾರುಕ್ ಖಾನ್ ಪುತ್ರ ಆರ್ಯನ್‌ ಖಾನ್‌ ಗೆ ಜಾಮೀನು

aryan khan
28/10/2021

ಮುಂಬೈ: ಡ್ರಗ್ಸ್‌ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ಶಾರುಕ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಮೂರು ದಿನಗಳ ವಿಚಾರಣೆ ಬಳಿಕ ಜಾಮೀನು ಮಂಜೂರು ಮಾಡಿದೆ.

ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್‌ 2ರಂದು ಆರ್ಯನ್ ಖಾನ್‌ ಅವರನ್ನು ಎನ್‌ಸಿಬಿ ವಶಕ್ಕೆ ಪಡೆದಿತ್ತು. ಕಳೆದ 21 ದಿನಗಳಿಂದ ಆರ್ಯನ್‌ ಜೈಲುವಾಸದಲ್ಲಿ ಇದ್ದಾರೆ. ಮಾಹಿತಿಗಳ ಪ್ರಕಾರ ವಿವರವಾದ ಆದೇಶ ನಾಳೆ ಸಿಗಲಿದೆ. ನಾಳೆ ಅಥವಾ ಶನಿವಾರ ಅವರು ಜೈಲಿನಿಂದ ಹೊರಬರಲಿದ್ದಾರೆ ಎನ್ನಲಾಗಿದೆ.

ಆರ್ಯನ್‌ ಖಾನ್‌ ಮಾತ್ರವಲ್ಲದೇ ಇತರ ಆರೋಪಿಗಳಾದ ಅರ್ಬಾಜ್‌ ಮರ್ಚಂಟ್‌ ಮತ್ತು ಮನ್ಮನ್‌ ಧಮೇಚಾ ಅವರಿಗೂ ಬಾಂಬೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈವರೆಗೂ ಪ್ರಕರಣದಲ್ಲಿ ನೈಜೀರಿಯಾದ ಇಬ್ಬರು ಸೇರಿದಂತೆ ಒಟ್ಟು 20 ಜನರನ್ನು ಎನ್‌ ಸಿಬಿ ಬಂಧಿಸಿದೆ.

ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಮನೀಶ್‌ ರಾಜ್‌ ಗರಿಯಾ ಮತ್ತು ಅವಿನ್‌ ಸಾಹು ಅವರಿಗೆ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ನೀಡಿತ್ತು. ವಿಶೇಷ ನ್ಯಾಯಾಲಯದಲ್ಲಿ ಜಾಮೀನು ದೊರೆಯದ ಹಿನ್ನೆಲೆಯಲ್ಲಿ ಆರ್ಯನ್‌ ಖಾನ್‌ ಅವರು ಬಾಂಬೆ ಹೈಕೋರ್ಟ್‌ ಮೊರೆಹೋಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ