ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ: ಪೊಲೀಸರಿಂದ ಮಾಹಿತಿ ಪಡೆದು ಖುಷ್ಬೂ ಸುಂದರ್ ಹೇಳಿದಿಷ್ಟು…!

ಉಡುಪಿ: ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಮಾಹಿತಿ ಸಂಗ್ರಹಿಸಿ ಖುಷ್ಬೂ ಸುಂದರ್ ವಾಪಸ್ ಆಗಿದ್ದಾರೆ.
ಇನ್ನೂ ಮಾಹಿತಿ ಸಂಗ್ರಹಿಸಿದ ಬಳಿಕ ಮಾತನಾಡಿದ ಅವರು, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ, ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ, ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ, ಈಗಷ್ಟೇ ತನಿಖೆ ಆರಂಭಿಸಿದ್ದೇವೆ, ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಬೇಡಿ, ಸಾಕ್ಷ್ಯ ಸಿಕ್ಕಿದೆಯಾ ಎನ್ನೋ ಬಗ್ಗೆ ಹೇಳಲು ಸಾಧ್ಯವಿಲ್ಲ, ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ, ಮಾಹಿತಿ ಸಂಗ್ರಹಕ್ಕೆ ನಮಗೆ ಇನ್ನು ಸ್ವಲ್ಪ ಸಮಯ ಬೇಕು ಎಂದು ಅವರು ಹೇಳಿದರು.
ಎಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕೆಂದು ಪ್ರಾಮಾಣಿಕವಾಗಿ ಕೋರುತ್ತೇನೆ, ಯಾವುದೇ ರೂಮರ್ ಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ, ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ. ಸಂಬಂಧಪಟ್ಟ ಫೋನ್ ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಇದಕ್ಕೆ ಹೊರತಾಗಿ ಯಾವುದೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ, ನಮಗೆ ನಮ್ಮ ಕೆಲಸ ಮಾಡಲು ಬಿಡಿ ಎಂದು ಅವರು ಹೇಳಿದರು.
ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ಎನ್ ಸಿಡಬ್ಲ್ಯೂ ಪರವಾಗಿ ನಾನು ಸ್ಥಳದಲ್ಲಿ ಇದ್ದೇನೆ. ನಮಗೆ ನಮ್ಮ ಕೆಲಸ ಮಾಡಲು ಬಿಡಿ, ಸದ್ಯ ನಿಮಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ, ಎನ್ ಸಿ ಡಬ್ಲ್ಯೂ ಗೆ ದೂರು ಬಂದ ಕಾರಣ ನಾನು ಇಲ್ಲಿ ಇದ್ದೇನೆ, ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಇಲ್ಲ, ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರ. ಇದು ಮಹಿಳೆಯರಿಗೆ ಸಂಬಂಧಿಸಿದ ವಿಚಾರ, ಕಾಯಬೇಕು, ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ, ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ, ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ, ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ, ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ, ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದು ಖುಷ್ಬೂ ಸುಂದರ್ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw