ಆಸೆ ಪೂರೈಸು ಎಂದು ಪೀಡಿಸಿದ ವಿವಾಹಿತನ ಕಿರುಕುಳ ತಾಳಲಾರದೇ ದುರಂತ ಸಾವಿಗೀಡಾದ ಬಾಲಕಿ! - Mahanayaka
11:38 AM Wednesday 20 - August 2025

ಆಸೆ ಪೂರೈಸು ಎಂದು ಪೀಡಿಸಿದ ವಿವಾಹಿತನ ಕಿರುಕುಳ ತಾಳಲಾರದೇ ದುರಂತ ಸಾವಿಗೀಡಾದ ಬಾಲಕಿ!

talangana
05/10/2021


Provided by

ಖಮ್ಮಂ:  ವಿವಾಹಿತನೋರ್ವನ ಮಾನಸಿಕ ಕಿರುಕುಳದಿಂದ ಬೇಸತ್ತು, ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದ್ದು, ತನ್ನ ಕುಟುಂಬಕ್ಕೆ ಆಧಾರವಾಗಿದ್ದ ಬಾಲಕಿಯ ಸಾವಿನಿಂದಾಗಿ ಆಕೆಯ ಕುಟುಂಬ ಅನಾಥವಾಗಿದೆ.

ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, 17 ವರ್ಷ ವಯಸ್ಸಿನ ಕುಸುಮರಾಜು ವರ್ಷಿತಾ ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದು,  ಇಲ್ಲಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು,  ಮಹಿಳಾ ಹಾಸ್ಟೆಲ್ ನಲ್ಲಿ ತಂಗಿದ್ದರು.

ತಾನು ಕೆಲಸ ಮಾಡುತ್ತಿದ್ದ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ತಿರುವೂರು ಮಂಡಲದ ಮುನುಕೋಲಾ ನಿವಾಸಿ ಮಲ್ಲವರಪು ಮಧುಕುಮಾರ್ ಎಂಬಾತ ಈ ಅಮಾಯಕಳ ಜೀವನದ ಜೊತೆಗೆ ಆಟವಾಡಿದ್ದು, ಈತ ವಿವಾಹಿತನಾಗಿದ್ದರೂ ಬಾಲಕಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸು, ನನ್ನ ದೈಹಿಕ ಆಸೆ ಪೂರೈಸು ಎಂದು ನಿರಂತರ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಜೊತೆಗೆ ನನ್ನ ಆಸೆ ಪೂರೈಸದಿದ್ದರೆ, ನೀನು ನನ್ನ ಜೊತೆಗೆ ಮಾತನಾಡಿರುವ ಆಡಿಯೋ ವೈರಲ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಆತ್ಮಹತ್ಯೆಗೂ ಮೊದಲು ವರ್ಷಿತಾ ತನ್ನ ಸ್ನೇಹಿತೆಗೆ ಕರೆ ಮಾಡಿ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.

ವರ್ಷಿತಾ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ ತಕ್ಷಣವೇ ಸ್ನೇಹಿತೆ ವರ್ಷಿತಾ ತಾಯಿಗೆ ತಕ್ಷಣವೇ ಕರೆ ಮಾಡಿ ವಿಚಾರ ತಿಳಿಸಿದ್ದು,  ಅವರು ಮನೆಗೆ ಹೋಗಿ ನೋಡಿದಾಗ ಮಗಳು ವಿಷದ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿದೆ. ಕುಟುಂಬಕ್ಕೆ ಆಧಾರವಾಗಿದ್ದ ತನ್ನ ಮುದ್ದಿನ ಪುತ್ರಿಯ ಸಾವನ್ನು ಅರಗಿಸಿಕೊಳ್ಳಲಾಗದೇ ತಾಯಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಘಟನೆ ಸಂಬಂಧ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ

ಶಾಕಿಂಗ್ ನ್ಯೂಸ್: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ!

ಮಹಿಳೆಗೆ ಪೆಟ್ರೋಲ್ ಸುರಿದು ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ | “ಪಾಳೆಗಾರಿಕೆ ಮನಸ್ಥಿತಿಯ ಕ್ರಿಮಿಗಳಿಗೆ  ಕಠಿಣ ಶಿಕ್ಷೆಯಾಗಲಿ”

ಪೊಲೀಸರ ಬದಲು ಬಿಜೆಪಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ  | ಅನೈತಿಕ ಪೊಲೀಸ್ ಗಿರಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

75 ಯುವತಿಯರನ್ನು ಮದುವೆಯಾಗಿ, 200 ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡಿದ ಪಾಪಿ ಅರೆಸ್ಟ್!

ಆನಂದ್ ಸಿಂಗ್, ಕಂಪ್ಲಿ ಗಣೇಶ್ ಎಣ್ಣೆ ಏಟು:  ಕೊನೆಗೂ ಪ್ರಕರಣ ರಾಜಿಯಲ್ಲಿ ಇತ್ಯರ್ಥ

ಆರ್ಯನ್ ಖಾನ್ ಜೊತೆಗೆ ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮಾಡೆಲ್ ಯಾರು ಗೊತ್ತಾ?

ಇತ್ತೀಚಿನ ಸುದ್ದಿ