ಅಶ್ಲೀಲ ಚಿತ್ರ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್ - Mahanayaka

ಅಶ್ಲೀಲ ಚಿತ್ರ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್

raj kundra
20/07/2021

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಸೋಮವಾರ ಪೊಲೀಸರು ಬಂಧಿಸಿದ್ದು, ಅಶ್ಲೀಲ ಚಿತ್ರ ತಯಾರಿಸಿ ಹಂಚಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ಅಪ್ಲಿಕೇಶನ್ ಮೂಲಕ ಬಿತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ.  ಈ ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2021ರ ಫೆಬ್ರವರಿಯಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಈ ಪ್ರಕರಣ ದಾಖಲಾಗಿತ್ತು.  ಪ್ರಕರಣ ದಾಖಲಾದ ಬಳಿಕ ಸಾಕಷ್ಟು ಸಾಕ್ಷಿಗಳನ್ನು ಸಂಗ್ರಹಿಸಿರುವ ಪೊಲೀಸರು. ಸೋಮವಾರ ಪ್ರಮುಖ ಆರೋಪಿ ಕುಂದ್ರನನ್ನು ಬಂಧಿಸಿದ್ದಾರೆ.

ನಮ್ಮ ಬಳಿಯಲ್ಲಿ ಸಾಕಷ್ಟು ಪುರಾವೆಗಳಿರುವುದರಿಂದ ಕುಂದ್ರಾನನ್ನು ಬಂಧಿಸಿರುವುದಾಗಿ ಮುಂಬೈ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.

ಇನ್ನಷ್ಟು ಸುದ್ದಿಗಳು…

ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ಚಿತ್ರೀಕರಣ: ಯುವತಿ ಕಿರುಚಿದಾಗ ಆರೋಪಿ ಪರಾರಿ

ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ

ಸಾಮಾನ್ಯ ಸಭೆಯ ವೇಳೆ ಗ್ರಾ.ಪಂ. ಸದಸ್ಯೆಯ ಕೈಗೆ ಕಚ್ಚಿದ ಜವಾನ!

ಚಿರತೆಯ ಜೊತೆಗೆ ಹೋರಾಡಿ ತನ್ನ ಮಗಳನ್ನು ರಕ್ಷಿಸಿದ ತಾಯಿ!

ಇತ್ತೀಚಿನ ಸುದ್ದಿ