ಅಸ್ಪೃಶ್ಯತೆ ಅನಿಷ್ಟ ಪದ್ಧತಿ ಅದನ್ನು ತೊಲಗಿಸೋಣ | ಗ್ರಾಮಸ್ಥರಿಗೆ ಪ್ರತಿಜ್ಞೆ ಮಾಡಿಸಿದ ಪೊಲೀಸರು - Mahanayaka
8:52 AM Wednesday 11 - December 2024

ಅಸ್ಪೃಶ್ಯತೆ ಅನಿಷ್ಟ ಪದ್ಧತಿ ಅದನ್ನು ತೊಲಗಿಸೋಣ | ಗ್ರಾಮಸ್ಥರಿಗೆ ಪ್ರತಿಜ್ಞೆ ಮಾಡಿಸಿದ ಪೊಲೀಸರು

kushtagi
24/09/2021

ಕೊಪ್ಪಳ: ದಲಿತ ಸಮುದಾಯದ ಬಾಲಕ ದೇಗುಲ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿ ಅಸ್ಪೃಷ್ಯತಾ ಆಚರಣೆ ಆಚರಿಸಿದ ಬೆನ್ನಲ್ಲೇ ಕೊಪ್ಪಳ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಸದ್ಯ ಅಸ್ಪೃಶ್ಯತೆ ವಿರುದ್ಧ ಜನಜಾಗೃತಿ ಮೂಡಿಸಲು ಕೊಪ್ಪಳ ಪೊಲೀಸರು ಮುಂದಾಗಿದ್ದಾರೆ.

ಕೊಪ್ಪಳದ ತಾಲೂಕಿನ ಬೇವಿನಾಳದಲ್ಲಿ ಸವರ್ಣಿಯ ಹಾಗೂ ದಲಿತ ಸಮುದಾಯ ಸಭೆ ನಡೆಸಿರುವ ಪೊಲೀಸರು ಅಸ್ಪೃಶ್ಯತೆ, ಅನಿಷ್ಟ ಪದ್ಧತಿ. ಅದನ್ನು ತೊಲಗಿಸೋಣ ಎಂದು ಗ್ರಾಮಸ್ಥರ ಬಳಿ ಪ್ರತಿಜ್ಞೆ ಮಾಡಿಸಿದ್ದಾರೆ. ಪೊಲೀಸರು ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕೊಪ್ಪಳ ಪೊಲೀಸರಂತೆಯೇ ರಾಜ್ಯದ ಪ್ರತಿ ಜಿಲ್ಲೆಯ ಪೊಲೀಸರು ಅಸ್ಪೃಶ್ಯತೆ ತೊಲಗಿಸಲು ಮುಂದಾಗಲಿ ಎನ್ನುವ ಒತ್ತಾಯಗಳು ಕೂಡ ಕೇಳಿ ಬಂದಿದೆ.

ಬಹಳಷ್ಟು ಜಿಲ್ಲೆಗಳಲ್ಲಿ ಅಸ್ಪೃಶ್ಯತೆ ಆಚರಣೆಗಳು ಇಂದಿಗೂ ಆಚರಣೆಯಲ್ಲಿದೆ. ಅಸ್ಪೃಶ್ಯತೆ ಆಚರಣೆಯನ್ನು ತಡೆಯಲು ಮತ್ತು ಇಂತಹ ಆಚರಣೆ ಇನ್ನೂ ಜೀವಂತ ಇರುವ ಪ್ರದೇಶಗಳನ್ನು ಪತ್ತೆ ಹಚ್ಚಲು ಪೊಲೀಸರು ರಹಸ್ಯವಾದ ತಂಡವನ್ನು ರಚಿಸಬೇಕು. ಈ ಮೂಲಕ ಅಸ್ಪೃಶ್ಯತೆಯನ್ನು  ಬೇರು ಸಮೇತ ಕಿತ್ತು ಹಾಕಿ ಕರ್ನಾಟಕವನ್ನು ಅಸ್ಪೃಶ್ಯ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎನ್ನುವ ಒತ್ತಾಯಗಳು ಕೊಪ್ಪಳದ ಮಿಯಾಪೂರದಲ್ಲಿ ನಡೆದ ಘಟನೆಯ ಬೆನ್ನಲ್ಲೇ ರಾಜ್ಯಾದ್ಯಂತ ಕೇಳಿ ಬಂದಿದೆ.

ಕೊಪ್ಪಳದ ಮಿಯಾಪೂರದಲ್ಲಿ ದಲಿತ ಬಾಲಕ ದೇವಸ್ಥಾನ ಪ್ರವೇಶಿದ್ದಕ್ಕೆ ದಂಡ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ದೂರು ಆಧರಿಸಿ ಕನಕಪ್ಪ ಪೂಜಾರಿ, ಹನುಮಗೌಡ, ಗವಿ ಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ, ಹಾಗೂ ಶರಣಗೌಡ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಅ.3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ | ಬಸವರಾಜ ಬೊಮ್ಮಾಯಿ

ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು ಎಂದ ಉತ್ತರ ಪ್ರದೇಶ ಸಚಿವ!

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

“ಪಿಎಂ ಕೇರ್ಸ್ ಫಂಡ್‍ ಗೆ  ಅಪ್ಪ-ಅಮ್ಮನೇ ಇಲ್ಲದಂತಾಗಿದೆ!”

ಪೆಟ್ರೋಲ್, ಡೀಸೆಲ್ ಗೆ ನೀರು ಬೆರಕೆ | ಪೆಟ್ರೋಲ್ ಬಂಕ್ ಮಾಲಿಕನ ವಿರುದ್ಧ ಗ್ರಾಹಕರಿಂದ ತೀವ್ರ ಆಕ್ರೋಶ

ತುಪ್ಪ ಬೇಕಾ ತುಪ್ಪ ಎಂದು ಮನೆಯೊಳಗೆ ಎಂಟ್ರಿ ಕೊಡುತ್ತಿದ್ದ ಮಹಿಳೆಯರು ಅರೆಸ್ಟ್ | ಅಷ್ಟಕ್ಕೂ ಇವರು ಮಾಡ್ತಿದ್ದದ್ದೇನು ಗೊತ್ತಾ?

ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ: ಗ್ಯಾಂಗ್ ಸ್ಟಾರ್ ಜಿತೇಂದರ್ ಗೋಗಿ ಸಹಿತ ನಾಲ್ವರು ಸಾವು

ಇತ್ತೀಚಿನ ಸುದ್ದಿ