ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಯಾವ ದೇಶದಲ್ಲಿ ಆಶ್ರಯ ಪಡೆದಿದ್ದು ಗೊತ್ತಾ? | ಕೊನೆಗೂ ಬಯಲಾಯ್ತು ರಹಸ್ಯ
ನವದೆಹಲಿ: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳುತ್ತಿದ್ದಂತೆಯೇ ಹಣದೊಂದಿಗೆ ಪರಾರಿಯಾಗಿದ್ದ ಅಫ್ಘಾನ್ ನ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಇದೀಗ ಯಾವ ದೇಶದಲ್ಲಿದ್ದಾರೆ ಎನ್ನುವುದು ತಿಳಿದು ಬಂದಿದೆ.
ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಅಶ್ರಫ್ ಘನಿ ಆಶ್ರಯ ಪಡೆದುಕೊಂಡಿದ್ದು, ಯುಎಇ ವಿದೇಶಾಂಗ ಸಚಿವಾಲಯ ಮತ್ತು ಅಂತಾರಾಷ್ಟ್ರೀಯ ಸಹಕಾರ ಇಲಾಖೆಯು ಈ ವಿಚಾರವನ್ನು ಖಚಿತಪಡಿಸಿದೆ.
ತಾಲಿಬಾನಿಗಳು ಕಾಬುಲ್ ಗೆ ಬರುತ್ತಿದ್ದಂತೆಯೇ ದೇಶ ಬಿಟ್ಟು ಓಡಿ ಹೋಗಿದ್ದ ಅಶ್ರಫ್ ಘನಿ ಬಳಿಕ ಫೇಸ್ ಬುಕ್ ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು. ರಕ್ತದ ಪ್ರವಾಹ ಹರಿಯುವ ಸಾಧ್ಯತೆ ಇದ್ದುದರಿಂದಾಗಿ ತಾನು ದೇಶವನ್ನು ಬಿಟ್ಟು ಹೋಗಿರುವುದಾಗಿ ತಿಳಿಸಿದ್ದರು.
ಈವರೆಗೆ ಘನಿ ಎಲ್ಲಿದ್ದರು ಎನ್ನುವುದು ಯಾರಿಗೂ ತಿಳಿದಿರಲಿಲ್ಲ. ಇದೀಗ ಅವರಿಗೆ ಯುಎಇ ಆಶ್ರಯ ನೀಡಿದೆ. ಮಾನವೀಯ ನೆಲೆಯಲ್ಲಿ ನಾವು ಆಶ್ರಯ ನೀಡಿದ್ದೇವೆ ಎಂದು ಯುಎಇ ಹೇಳಿದೆ. ಅಶ್ರಫ್ ಘನಿ ನಾಪತ್ತೆಯಾದ ಬಳಿಕ ಅವರು ತಜಕಿಸ್ತಾನ, ಉಜ್ಜೇಕಿಸ್ತಾನ ಅಥವಾ ಒಮನ್ ನಲ್ಲಿರಬಹುದು ಎಂದು ಹೇಳಲಾಗಿತ್ತು. ಆದರೆ ಇದೀಗ ಅವರು ಯುಎಇಯಲ್ಲಿರುವುದು ಸ್ಪಷ್ಟವಾಗಿದೆ.
ಇನ್ನಷ್ಟು ಸುದ್ದಿಗಳು…
ತನ್ನ ಬಗ್ಗೆ ತಾನೇ ಪುಸ್ತಕ ಬರೆದುಕೊಂಡು ಸ್ವಾತಂತ್ರ್ಯ ಹೋರಾಟಗಾರನಾದ ಸಾರ್ವರ್ಕರ್ | ಶಾಫಿ ಬೆಳ್ಳಾರೆ
ಸಾರ್ವರ್ಕರ್ ಗಲಾಟೆ: ಎಸ್ ಡಿಪಿಐ ಮತ್ತು ಬಿಜೆಪಿಯ ಒಳ ಒಪ್ಪಂದದ ಕಾರ್ಯಕ್ರಮ | ಹಿಂದೂ ಮಹಾಸಭಾ ಆಕ್ರೋಶ
ಡೆತ್ ನೋಟ್ ಬರೆದಿಟ್ಟು ಇಡೀ ಕುಟುಂಬವೇ ನಾಪತ್ತೆ! | ಆತಂಕದಲ್ಲಿ ಸಂಬಂಧಿಕರು
ಟ್ವಿಟರ್ ಬರ್ಡ್ ಫ್ರೈ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು | ರಾಹುಲ್ ಖಾತೆ ಲಾಕ್ ಗೆ ಆಕ್ರೋಶ
ತಮಿಳುನಾಡಿನಂತೆ ಕರ್ನಾಟಕದಲ್ಲಿಯೂ ಪೆಟ್ರೋಲ್ ಬೆಲೆ ಇಳಿಕೆಯಾಗುತ್ತಾ? | ಸಿಎಂ ಬೊಮ್ಮಾಯಿ ಹೇಳಿದ್ದೇನು?