ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ನಿಂದನೆ: ಖಡಕ್ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ - Mahanayaka
1:30 AM Wednesday 5 - February 2025

ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ನಿಂದನೆ: ಖಡಕ್ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

siddaramaiah
07/04/2024

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಧರ್ಮ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ಕಿಡಿಗೇಡಿಗಳು ನಿಂದಿಸಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು  ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ ಎಂದಿದ್ದಾರೆ.

ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ ಎಂದಿದ್ದಾರೆ.

ಹೀಗಿದ್ದರೂ, ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು, ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ ಎಂದರು.

ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ