ರೈಲ್ವೇ ಸ್ಟೇಷನ್ ಅಭಿವೃದ್ಧಿ ಮಾಡಿದ್ರೂ ರೈಲ್ವೆ ಟಿಕೆಟ್ ದರ ಹೆಚ್ಚಳ ಇಲ್ಲ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಷ್ಟನೆ
ದೇಶದಲ್ಲಿ ರೈಲು ನಿಲ್ದಾಣಗಳ ಪುನರ್ ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
ಈ ಕಾರ್ಯಕ್ರಮದ ಬಳಿಕ ಮಾತನಾಡಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗೆ ಅಗತ್ಯವಿರುವ 25 ಸಾವಿರ ಕೋಟಿಯನ್ನು ಪ್ರಸ್ತುತ ಬಜೆಟ್ ಮೂಲಕ ಹಂಚಿಕೆ ಮಾಡಲಾಗುವುದು.ಈ ಯೋಜನೆಯು ಸಮಾಜದ ಎಲ್ಲಾ ಸ್ತರಗಳಲ್ಲಿನ ಪ್ರಯಾಣಿಕರಿಗೆ ತಡೆರಹಿತ ಪ್ರಯಾಣವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
ಪ್ರಧಾನಿ ಮೋದಿ ಸಾಮಾನ್ಯ ಜನರ ಜೀವನವನ್ನು ಉನ್ನತೀಕರಿಸಲು ಕೆಲಸ ಮಾಡುತ್ತಿದ್ದಾರೆ. ನಿಲ್ದಾಣದ ಪುನರಾಭಿವೃದ್ಧಿಯ ಉದ್ದೇಶವೂ ಅದೇ ಆಗಿದೆ. ಅವರು ಯಾವುದೇ ಹೊರೆ ಇಲ್ಲದೇ ವಿಶ್ವ ದರ್ಜೆಯ ನಿಲ್ದಾಣಗಳನ್ನು ಹೊಂದಬೇಕೆಂದು ನಾವು ಬಯಸುತ್ತೇವೆ. ನಿಲ್ದಾಣದ ಪುನರ್ ಅಭಿವೃದ್ಧಿ ಹೆಸರಿನಲ್ಲಿ ನಾವು ಪ್ರಯಾಣ ದರವನ್ನು ಹೆಚ್ಚಿಸಿಲ್ಲ ಅಥವಾ ಶುಲ್ಕವನ್ನು ನಿಗದಿಪಡಿಸಿಲ್ಲ. ದೇಶದಲ್ಲಿ ಸುಮಾರು 1,300 ಪ್ರಧಾನ ನಿಲ್ದಾಣಗಳನ್ನು ‘ಅಮೃತ್ ಭಾರತ್ ನಿಲ್ದಾಣಗಳು’ ಎಂದು ಮರುಅಭಿವೃದ್ಧಿಪಡಿಸುವ ಯೋಜನೆಯನ್ನು ರೈಲ್ವೇಸ್ ಕಲ್ಪಿಸಿದೆ ಎಂದರು.
ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ, ಅಂತಹ ತಲಾ 55 ನಿಲ್ದಾಣಗಳನ್ನು ಸುಮಾರು 4,000 ಕೋಟಿ ವೆಚ್ಚದಲ್ಲಿ, ಮಧ್ಯಪ್ರದೇಶದಲ್ಲಿ 34 ನಿಲ್ದಾಣಗಳನ್ನು ಅಂದಾಜು 1,000 ಕೋಟಿ ರೂ ಮತ್ತು ಮಹಾರಾಷ್ಟ್ರದಲ್ಲಿ 44 1,500 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಅಲ್ಲದೆ, ತಮಿಳುನಾಡು, ಕರ್ನಾಟಕ ಮತ್ತು ಕೇರಳದ ಹಲವಾರು ರೈಲು ನಿಲ್ದಾಣಗಳನ್ನು ಮರುಅಭಿವೃದ್ಧಿಗೊಳಿಸಲಾಗುವುದು. ಒಪ್ಪಂದದ ದಾಖಲೆಗಳು, ವಾಸ್ತುಶಿಲ್ಪ, ವಿನ್ಯಾಸ ಮತ್ತು ಸುರಕ್ಷತೆಯ ವಿಶ್ಲೇಷಣೆಯನ್ನು ಒಳಗೊಂಡಿರುವ ಯೋಜನೆಯ ಸಮಗ್ರತೆಯನ್ನು ತಿಳಿದುಕೊಳ್ಳಲು ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಯೋಜನೆಯ ಭಾಗವಾಗಲು ಸುಮಾರು 9,000 ಎಂಜಿನಿಯರ್‌ಗಳಿಗೆ ತರಬೇತಿ ನೀಡುತ್ತಿದೆ ಎಂದು ವೈಷ್ಣವ್ ಹೇಳಿದರು. ಭಾನುವಾರ ಪ್ರಧಾನಿ ಮೋದಿ ಅವರು 508 ಅಮೃತ್ ಭಾರತ್ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw