ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ - Mahanayaka
6:17 PM Wednesday 11 - December 2024

ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ

mangalamukhi
16/02/2022

ಸುರತ್ಕಲ್: ಕಳೆದ ಕೆಲವು ದಿನಗಳಿಂದ ಎನ್‌ಐಟಿಕೆ ಬಳಿ ಇರುವ ಟೋಲ್ ಗೇಟ್ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ ನಡೆದಿರುವ ಬಗ್ಗೆ ವರದಿಯಾಗಿದೆ.

ಕಳೆದ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಮೊದಲು ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು. ನಂತರ ಮಂಗಳಮುಖಿಯರ ತಂಡ ಆಗಮಿಸಿ, ಪ್ರತಿಭಟನಾ ನಿರತರಿಗೆ ಅವಾಚ್ಯ ಶಬ್ಧಗಳಿಂದ ಬಯ್ದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕೂಡಲೇ ಆಸಿಫ್ ಆಪತ್ಭಾಂಧವ ಫೇಸ್ ಬುಕ್ ಲೈವ್ ವಿಡಿಯೋ ಮಾಡಿದ್ದಾರೆ. ತಂಡದಲ್ಲಿದ್ದ ಹಲವು ಮಂಗಳಮುಖಿಯರು ಬಟ್ಟೆ ಎತ್ತಿ ನರ್ತನ ಪ್ರಾರಂಭಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ಪ್ರತಿಭಟನಾ ವೇದಿಕೆಯನ್ನು ನಾಳೆಯೇ ಒದ್ದು ಉರುಳಿಸುತ್ತೇವೆ. ನಿಮ್ಮನ್ನು ಇಲ್ಲಿಂದ ಓಡಿಸುತ್ತೇವೆ. ನಾಳೆ ನಿಮ್ಮನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೂರಿಸುತ್ತೇವೆ ಎಂದು ಮಂಗಳಮುಖಿಯರು ಬೆದರಿಕೆ ಒಡ್ಡಿದ್ದಾರೆ ಎಂದು ದೂರಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ಇನ್ನಿಲ್ಲ

ರೈಲು ಹಳಿಯ ಮೇಲೆ ನಿಂತು ಸೆಲ್ಫಿ: ನಾಲ್ವರು ಯುವಕರ ದುರ್ಮರಣ

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ವಿಧಿವಶ

ಅಮ್ಮನ ಸಾವಿಗೆ ಕಾರಣವಾದ ಮಗಳ ವಾಟ್ಸಾಪ್ ಸ್ಟೇಟಸ್‌

ಇತ್ತೀಚಿನ ಸುದ್ದಿ