ಆಸ್ಪತ್ರೆಗೆ ದಾಖಲಾದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ!
ಬೆಂಗಳೂರು: ತೀವ್ರವಾದ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದು, ತಮ್ಮ ಆರೋಗ್ಯದ ಕುರಿತು ಟ್ವೀಟ್ ಮಾಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಕಾಲು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ವೈದ್ಯರ ಸಲಹೆಯ ಮೇರೆಗೆ ಮುಂಬೈನ ಆಸ್ಪತ್ರೆಯಲ್ಲಿ ಆಪರೇಷನ್ ಗೆ ಒಳಗಾಗಿರುವುದಾಗಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಿಮ್ಮೆಲ್ಲರ ಹಾರೈಕೆ ಆಶೀರ್ವಾದದಿಂದ ನಾನು ಗುಣಮುಖನಾಗುತ್ತಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುವುದಾಗಿಯೂ ಅವರು ತಿಳಿಸಿದ್ದಾರೆ. ನಿಮ್ಮ ಅಹವಾಲುಗಳಿಗೆ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದಾರೆ, ಸಹಕರಿಸಿ ಎಂದು ರೇಣುಕಾಚಾರ್ಯ ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka