ಆಸ್ಪತ್ರೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಕೊರೊನಾ ಸೋಂಕಿತ! - Mahanayaka
9:37 PM Wednesday 5 - February 2025

ಆಸ್ಪತ್ರೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಕೊರೊನಾ ಸೋಂಕಿತ!

death
24/04/2021

ಬೆಂಗಳೂರು: ಕೊರೊನಾ ಪಾಸಿಟಿವ್ ವರದಿ ಬಂದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ 61 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕೆಲವು ದಿನಗಳ ಹಿಂದೆಯಷ್ಟೇ ವಿಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಕಳೆದ ರಾತ್ರಿ ಆಸ್ಪತ್ರೆಯ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.  ಮೃತನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ