ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾದ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್

ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲ್ ಗೌಡ ಅಧ್ಯಕ್ಷತೆಯ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯಿಂದ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಗೋಪಾಲ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಚತ್ತೀಸ್ ಗಢ ರಾಜ್ಯಪಾಲ ಬಿಸ್ವ ಭೂಷಣ್ ಹರಿಚರಣ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅವರ ಆತ್ಮಕತೆ ‘ಬ್ಯಾಟಲ್ ನಾಟ್ ಓವರ್’ ಕೃತಿಯ ಇಂಗ್ಲಿಷ್ ಅನುವಾದ ಅದೇ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ದೇಶದ ಹಿರಿಯ ನ್ಯಾಯಾಧೀಶರು ಹಾಗೂ ಅಧಿಕಾರಿಗಳು ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಪದಾಧಿಕಾರಿಗಳು, ಸದಸ್ಯರು ಹಾಗೂ ಪೋಷಕರಾಗಿದ್ದು, ಈ ಸಂಸ್ಥೆಯಿಂದ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಈ ಹಿಂದೆ ಹಲವು ಖ್ಯಾತ ನ್ಯಾಯಾಧೀಶರು, ಕಲಾವಿದರು, ಉದ್ಯಮಿಗಳು, ವಿಜ್ಞಾನಿಗಳು ಮತ್ತಿತರ ಹಿರಿಯ ಸಾಧಕರಿಗೆ ಹಾಗೂ ಬುದ್ಧಿಜೀವಿಗಳಿಗೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw