ಭೂಮಿಗೆ ಬರಲು ಸಜ್ಜಾದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ತಂಡ

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಷ್ ವಿಲ್ಮೋರ್ ಭೂಮಿಗೆ ಬರಲು ಸಜ್ಜಾಗಿದ್ದಾರೆ. ಆದರೆ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದರಿಂದ ಅವರ ಬರುವಿಕೆ ಮತ್ತಷ್ಟು ವಿಳಂಬವಾಗಲಿದೆ ಎಂದು ಹೇಳಲಾಗಿದೆ.
ಯುಎಸ್ ಬಾಹ್ಯಾಕಾಶ ಸಂಸ್ಥೆ ನಾಸಾ ಕ್ರೂ-10 ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಬೇಕಾಗಿತ್ತು ಆದರೆ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದರಿಂದ ಕ್ರ್ಯೂ-10 ಉಡಾವಣೆಯನ್ನು ಮುಂದೂಡಬೇಕಾಯಿತು. ಹೈಡ್ರಾಲಿಕ್ ವ್ಯವಸ್ಥೆಯಲ್ಲಿನ ಸಮಸ್ಯೆಯಿಂದಾಗಿ ಉಡಾವಣೆಯನ್ನು ಮುಂದೂಡಬೇಕಾಯಿತು ಎಂದು ನಾಸಾ ಹೇಳಿದೆ.
ಕುತೂಹಲಕಾರಿ ಸಂಗತಿಯೆಂದರೆ, ಬಾಹ್ಯಾಕಾಶದಲ್ಲಿ ಸಿಲುಕಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ರನ್ನು ಮರಳಿ ಕರೆತರಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವತಃ ಆಸಕ್ತಿ ತೋರಿಸಿದ್ದಾರೆ ಅದರಂತೆ ಗಗನಯಾತ್ರಿಗಳನ್ನು ಕರೆತರುವ ಜವಾಬ್ದಾರಿಯನ್ನು ಸ್ಪೇಸ್‌ಎಕ್ಸ್ ಮಾಲೀಕ ಎಲೋನ್ ಮಸ್ಕ್ ರಿಗೆ ವಹಿಸಿದ್ದರು.
ಅದರಂತೆ ಮಸ್ಕ್ ಒಪ್ಪಿಗೆಯನ್ನು ನೀಡಿದ್ದು ಇದಾದ ಬಳಿಕ ಮಸ್ಕ್ ರ ಕಂಪನಿ ಸ್ಪೇಸ್‌ಎಕ್ಸ್ ಗಗನಯಾತ್ರಿಗಳನ್ನು ಕರೆತರುವ ಕೆಲಸವನ್ನು ಆರಂಭಿಸಿತ್ತು ಅದರಂತೆ ಇಂದು ಬೆಳಗ್ಗೆ ಭಾರತೀಯ ಕಾಲಮಾನ 5.18ಕ್ಕೆ ಉಡಾವಣೆಗೆ ನಿಗದಿಯಾಗಿತ್ತು.
ಜೊತೆಗೆ ನಾಲ್ವರು ಗಗನಯಾತ್ರಿಗಳು ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಬೇಕಿತ್ತು ಆದರೆ ಕೊನೆ ಗಳಿಗೆಯಲ್ಲಿ ಲಾಂಚ್ ಪ್ಯಾಡ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆಯನ್ನು ಮುಂದೂಡಬೇಕಾಯಿತು ಎಂದು ಸ್ಪೇಸ್ ಎಕ್ಸ್ ಹೇಳಿದೆ.
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕಳೆದ ವರ್ಷ ಜೂನ್ 5, 2024 ರಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿದ್ದರು. ಸುನೀತಾ ಒಂದು ವಾರದ ನಂತರ ಹಿಂದಿರುಗಬೇಕಿತ್ತು, ಆದರೆ ಬೋಯಿಂಗ್ ಸ್ಟಾರ್‌ಲೈನರ್‌ನ ಸಮಸ್ಯೆಯಿಂದಾಗಿ ಅಲ್ಲಿಯೇ ಸಿಲುಕಿಕೊಂಡರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj