ಅಸ್ವಸ್ಥ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಪತ್ತೆ: ಮಾತುಬಾರದ ಮಹಿಳೆಯ ಗುರುತು ಪತ್ತೆಗೆ ಮನವಿ
ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಪರಪ್ಪು ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಅಸ್ವಸ್ಥರಾದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಕಳಿಯ ಪಿ.ಡಿ.ಒ. ವೃದ್ದೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಮಹಿಳೆ ಮೂಗಿಯಾಗಿದ್ದು, ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಆದರೆ ಆಲರ ಎಲ್ಲಿಂದ ಬಂದಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಈಕೆಯ ಬಗ್ಗೆ ಯಾವುದೇ ಮಾಹಿತಿಗಳು ಇದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಅಥವಾ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸಲು ಕೋರಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka