ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ! - Mahanayaka
5:55 PM Tuesday 24 - December 2024

ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ!

Simla himachal pradesh news
24/07/2021

ಶಿಮ್ಲಾ: ಆಟವಾಡುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕರೆದೊಯ್ದ ನೆರೆಯ ಮನೆಯ ಯುವಕ ಅತ್ಯಾಚಾರ ನಡೆಸಿದ ಘಟನೆ ಹಿಮಾಚಲ ಪ್ರದೇಶದ ಚೌಪಾಲ್ ನೆರ್ವಾನ್ ತಹಸೀಲ್ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕೂಡ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಲಾಗಿದೆ. ಈತ ವಯಸ್ಕನೇ ಅಥವಾ ಅಪ್ರಾಪ್ತ ವಯಸ್ಕನೇ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಬಾಲಕಿಯನ್ನು ಆಟವಾಡಲೆಂದು ಕರೆದೊಯ್ದ ಆರೋಪಿಯು ಮನೆಯ ಬಳಿಯ ಹೊಲವೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ವೇಳೆ ಬಾಲಕಿಯ ಕೂಗಾಟ ಕೇಳಿ ಸಂತ್ರಸ್ತೆಯ ತಾಯಿ ಸ್ಥಳಕ್ಕೆ ಓಡಿ ಬಂದಿದ್ದು, ಈ ವೇಳೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಇನ್ನೂ ಘಟನೆಯ ಬಳಿಕ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ವಿಚಾರಣೆ ನಡೆಸಿರುವ ಪೊಲೀಸರು ಆತನ ವಯಸ್ಸನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಆತನ ದಾಖಲೆಗಳನ್ನು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಲಖ್ವೀರ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

 

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಮನೆಯ 9 ಮಂದಿ ದುರಂತ ಸಾವು!

ನನ್ನ ಗಂಡ ಅಮಾಯಕ, ಅವರು ಮಾಡಿದ್ದು ಸೆಕ್ಸ್ ವಿಡಿಯೋ ಅಲ್ಲ ಕಾಮ ಪ್ರಚೋದಕ ವಿಡಿಯೋ | ಶಿಲ್ಪಾ ಶೆಟ್ಟಿ

ರೆಡ್ ಅಲಾರ್ಟ್: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

“BSP ಗೆದ್ದು ಬಂದ ನೆಲದಲ್ಲಿ ರಾಮಮಂದಿರ ನಿರ್ಮಾಣವಾಗುತ್ತದೆ” | ಬಿಎಸ್ ಪಿಯಿಂದ ಅಚ್ಚರಿಯ ಹೇಳಿಕೆ

ಇತ್ತೀಚಿನ ಸುದ್ದಿ