ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ! - Mahanayaka
1:41 AM Thursday 12 - December 2024

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ!

auto chalaka
13/09/2022

ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ.

ಮೃತರನ್ನು ಹೆರ್ಗ ಗ್ರಾಮದ ನಿವಾಸಿ 53ವರ್ಷದ ರಾಧಕೃಷ್ಣ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಣಿಪಾಲ ಪೋಲಿಸರು ಮಹಜರು, ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಮಣಿಪಾಲ ಆಸ್ಪತ್ರೆಯ ಶವಗಾರಕ್ಕೆ ವೈದ್ಯಕೀಯ ಪರೀಕ್ಷೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ನೆರವಾದರು.


ಮಣಿಪಾಲದಲ್ಲಿ ಮಲಗಿದ ಸ್ಥಿತಿಯಲ್ಲೆ ವ್ಯಕ್ತಿ ಸಾವು: ವಾರಸುದಾರರಿಗೆ ಸೂಚನೆ

prabhakar

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಮುಂಬೈ ನಿವಾಸಿ 50ವರ್ಷ ಪ್ರಾಯದ ಪ್ರಭಾಕರ್ ಎಂದು ಗುರುತಿಸಲಾಗಿದೆ. ಮೃತನ ಸಂಬಂಧಿಕರು ಅಮಾಸೆಬೈಲು,  ಅಂಬಾಗಿಲು ಪರಿಸರದಲ್ಲಿ ಇದ್ದಾರೆಂದು ಹೇಳಲಾಗುತ್ತಿದೆ.

ವ್ಯಕ್ತಿಯ ಶವವನ್ನು ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಕೆ.ಎಂ.ಸಿ ಆಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಟ್ಟಿದ್ದಾರೆ.

ಸಂಬಂಧಿಕರು ಮಣಿಪಾಲ ಪೋಲಿಸ್ ಠಾಣೆಯನ್ನು ಅಥವಾ ಮೊಬೈಲ್ ಸಂಖ್ಯೆ 94808 05475, 94808 05448 ಅನ್ನು ಸಂಪರ್ಕಿಸಲು ಸೂಚಿಸಲಾಗಿದೆ.


ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ