ಗೆಳತಿಗೆ ಮೆಸೇಜ್ ಮಾಡಿ ಲಾಡ್ಜ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
27/09/2022
ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ನಡೆದಿದೆ.
ಕಾಸರಗೋಡು ಮೂಲದ ಅಮೃತಾ (27), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಂಎಸ್‌ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.
ಕೆಲವು ಸಮಯದಿಂದ ಖಿನ್ನತೆಗೊಳಗಾಗಿರುವ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳೂರು ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು, ತನ್ನ ಗೆಳತಿಗೆ ಸಂದೇಶ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka