ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ ಮತ್ತು ಪತ್ನಿ: ಪತ್ನಿಯ ದಾರುಣ ಸಾವು - Mahanayaka
11:01 AM Thursday 12 - December 2024

ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ ಮತ್ತು ಪತ್ನಿ: ಪತ್ನಿಯ ದಾರುಣ ಸಾವು

suicide
16/02/2022

ಚಿಕ್ಕಬಳ್ಳಾಪುರ: ಪೊಲೀಸ್ ಪೇದೆ ಹಾಗೂ ಪೇದೆಯ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮವಾಗಿ ಪತ್ನಿ ಸಾವನ್ನಪ್ಪಿ ಪೇದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಣಕನೂರು ಬಳಿ ನಡೆದಿದೆ.

ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಹೇಳಲಾಗಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುರೇಂದ್ರ ಕುಮಾರ್ ಮತ್ತು ಅವರ ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭಗೊಂಡಿದ್ದು, ಜಗಳ ವಿಕೋಪಕ್ಕೆ ತಿರುಗಿ ಸುರೇಂದ್ರ ಕುಮಾರ್ ಅವರು ಕೋಪದಿಂದ ತಮ್ಮ ಕೈಗೆ ಗಾಯ ಮಾಡಿಕೊಂಡಿದ್ದಾರೆನ್ನಲಾಗಿದೆ.

ಇದರಿಂದ ನೊಂದ ಅವರ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರು ಮೃತಪಟ್ಟಿದ್ದಾರೆ. ಆದರೆ, ಸುರೇಂದ್ರ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರೇಮ ನಿವೇದನೆ ತಿರಸ್ಕರಿಸಿದ್ದಕ್ಕೆ ಹಾಡ ಹಗಲೇ ಯುವತಿಯ ಕತ್ತು ಸೀಳಿದ ಪಾಗಲ್ ಪ್ರೇಮಿ!

ಸಚಿವ ಈಶ್ವರಪ್ಪ  ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

ನೀನು ಲೂಟಿಕೋರ ನನ್ಮಗ, ದೇಶದ್ರೋಹಿ: ಈಶ್ವರಪ್ಪ ವಿರುದ್ಧ ಗುಡುಗಿದ ಡಿ.ಕೆ.ಶಿವಕುಮಾರ್

ನಂದಿನಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

ಇತ್ತೀಚಿನ ಸುದ್ದಿ