ಹುಬ್ಬಳ್ಳಿ ಗಲಭೆ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಓರ್ವ ಆರೋಪಿ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಯೋರ್ವ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ವರದಿಗಳ ಪ್ರಕಾರ ಟರ್ಪಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಮಹಮ್ಮದ್ ಆರೀಫ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಯತ್ನದ ವೇಳೆ ಈತನ ಜೊತೆಗಿದ್ದ ಮತ್ತೊಬ್ಬ ಆರೋಪಿ, ಆತನ ಜೊತೆಗಿದ್ದ ಮತ್ತೊಬ್ಬ ಆರೋಪಿ ಈತನನ್ನು ರಕ್ಷಿಸಿದ್ದು, ಇದೀಗ ಮಹಮ್ಮದ್ ಆರೀಫ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹಳೆ ಹುಬ್ಬಳ್ಳಿಯಲ್ಲಿ ಇದೇ ತಿಂಗಳ 14 ರಂದು ಪೊಲೀಸ್ ಠಾಣೆ ಮುಂದೆ ಗಲಭೆ ನಡೆದಿದ್ದು, ಈಗಾಗಲೇ ಹಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಯುವಕನೊಬ್ಬ ಹಾಕಿದ ಪೋಸ್ಟ್ ಸಂಬಂಧ ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಸ್ಲಿಮರು ಹಳೆ ಹುಬ್ಬಳ್ಳಿ ಠಾಣೆ ಎದುರು ಜಮಾಯಿಸಿದಾಗ ಈ ಗಲಭೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಾಟ್ಸಾಪ್ ನಲ್ಲಿ ಕ್ಯಾಶ್ ಬ್ಯಾಕ್ ಸಿಗಬೇಕಾದರೆ ಏನು ಮಾಡಬೇಕು ಗೊತ್ತಾ?
ಊಟ ನಿರಾಕರಣೆ, ಏಸಿ ಇಲ್ಲದೇ ಚಡಪಡಿಸಿದ ದಿವ್ಯಾ ಹಾಗರಗಿ!
ಶಾಕಿಂಗ್ ನ್ಯೂಸ್: ಬಿಸಿಲಿನ ತಾಪಕ್ಕೆ ಸುಟ್ಟು ಹೋದ ಯುವಕನ ಬೆನ್ನು!
ಭಾರತ ಹಿಂದಿ ಭಾಷಿಗರದ್ದು, ಹಿಂದಿಯನ್ನು ಪ್ರೀತಿಸದವರು ಭಾರತ ಬಿಟ್ಟು ಹೋಗಿ: ಉತ್ತರ ಪ್ರದೇಶ ಸಚಿವ
“ನೀನು ನೋಡಲು ಚೆನ್ನಾಗಿಲ್ಲ” ಎಂದು ನಿಂದಿಸಿ, ಟಾಯ್ಲೆಟ್ ಕ್ಲೀನರ್ ಕುಡಿಸಿ ಗರ್ಭಿಣಿ ಪತ್ನಿಯ ಹತ್ಯೆ