ಅತ್ಯಾಚಾರ ನಡೆದು ಕೇವಲ 9 ದಿನಗಳಲ್ಲಿಯೇ ಅಪರಾಧಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!
ಜೈಪುರ: 9 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 25 ವರ್ಷ ವಯಸ್ಸಿನ ಅಪರಾಧಿಗೆ ಕೋರ್ಟ್ ಕೃತ್ಯ ನಡೆದು ಕೇವಲ 9 ದಿನಗಳಲ್ಲಿಯೇ ಶಿಕ್ಷೆ ಪ್ರಕಟ ಮಾಡುವ ಮೂಲಕ ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ.
ಜೈಪುರ ನ್ಯಾಯಾಲಯ ಮಂಗಳವಾರ ಅತ್ಯಾಚಾರ ಪ್ರಕರಣದ ಅಪರಾಧಿ ಕಮಲೇಶ್ ಮೀನಾ ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ಪ್ರಕರಣ ಕೋರ್ಟ್ ಮೆಟ್ಟಿಲೇರಿ ಕೇವಲ ಐದು ‘ಕರ್ತವ್ಯ ದಿನ’ಗಳ ಅವಧಿಯಲ್ಲಿ ತೀರ್ಪು ಪ್ರಕಟವಾಗಿದೆ ಎಂದು ಜೈಪುರ ದಕ್ಷಿಣ ಉಪ ಪೊಲೀಸ್ ಆಯುಕ್ತ ಹರೇಂದ್ರ ಕುಮಾರ್ ಹೇಳಿದ್ದಾರೆ.
ಸೆಪ್ಟೆಂಬರ್ 26ರಂದು ಅಪರಾಧಿಯು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಜೈಪುರ ಮೆಟ್ರೊಪಾಲಿಟನ್ ಪೋಕ್ಸೊ ನ್ಯಾಯಾಲಯವು ಅತ್ಯಂತ ಕ್ಷಿಪ್ರಗತಿಯಲ್ಲಿ ತೀರ್ಪು ನೀಡಿದೆ ಎಂದು ಅವರು ತಿಳಿಸಿದರು.
ಐಪಿಸಿ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸೆಪ್ಟೆಂಬರ್ 26ರ ಮಧ್ಯರಾತ್ರಿ ಕೋತ್ಖವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು. ಮರುದಿನ ಮುಂಜಾನೆ ಆರೋಪಿಯನ್ನು ಬಂಧಿಸಲಾಯಿತು. ಪ್ರಕರಣ ದಾಖಲಾದ 18 ಗಂಟೆಗಳಲ್ಲಿ ಆತನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಯಿತು. ನ್ಯಾಯಾಲಯವು ಐದು ಕರ್ತ್ಯವ್ಯ ದಿನಗಳಲ್ಲೇ ವಿಚಾರಣೆಯನ್ನು ಪೂರ್ಣಗೊಳಿಸಿದೆ. ತೀರ್ಪು ಪ್ರಕಟಿಸಿದೆ ಎಂದು ಹರೇಂದ್ರ ಕುಮಾರ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಗಾಂಧಿ ಜಯಂತಿ ದಿನವೇ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ದೈಹಿಕ ಹಲ್ಲೆ
ಸಾವಿನ ಕೊನೆಯ ಕ್ಷಣದಲ್ಲಿ “ಅಪ್ಪಾ ಬೇಗ ಬನ್ನಿ” ಎಂದು ಮಗ ಹೇಳಿದ್ದ | ಮಗನ ಸಾವು ನೆನೆದು ಬಿಕ್ಕಿಬಿಕ್ಕಿ ಅತ್ತ ರೈತ
ಲಖೀಂಪುರ್ ಖೇರ್ ಸಚಿವನ ಪುತ್ರ ರೈತರನ್ನು ಕೆಣಕಿ, ಗುಂಡು ಹಾರಿಸಿದ್ದ | ಎಫ್ ಐಆರ್ ನಲ್ಲಿ ಉಲ್ಲೇಖ
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಗನ ಬರ್ಬರ ಹತ್ಯೆ | ತಾಯಿ ಹಾಗೂ ಆಕೆಯ ಪ್ರಿಯಕರ ಅರೆಸ್ಟ್
ಏಕಾಏಕಿ ಮುರಿದು ಬಿದ್ದ ತೂಗು ಸೇತುವೆ | ನದಿಗೆ ಬಿದ್ದ 30 ವಿದ್ಯಾರ್ಥಿಗಳು
‘ಮತಾಂತರ ನಿಷೇಧ ಕಾಯ್ದೆ’ ಜಾರಿಗೆ ಒತ್ತಾಯಿಸಿದ ಪ್ರತಿಭಟನೆಯಲ್ಲಿ ನಾನು ಭಾಗವಹಿಸಿಲ್ಲ: ಡಾ.ಶ್ರೀನಿವಾಸ್ ಸ್ಪಷ್ಟನೆ