ದೂರು ನೀಡಲು ಬಂದಿದ್ದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ! - Mahanayaka

ದೂರು ನೀಡಲು ಬಂದಿದ್ದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ!

uttarpradesh
04/05/2022

ಲಕ್ನೋ:  ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲು ಹೋದ ಸಂತ್ರಸ್ತೆಯ ಮೇಲೆಯೇ ಪೊಲೀಸ್ ಅಧಿಕಾರಿಯೊಬ್ಬ ಮತ್ತೊಮ್ಮೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಲಲಿತ್ ಪುರದಲ್ಲಿ ನಡೆದಿದೆ.

ತಿಲಕ್ ಧಾರಿ ಸರೋಜ್ ಎಂಬಾತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಪೊಲೀಸ್ ಅಧಿಕಾರಿ ಎಂದು ಗುರುತಿಸಲಾಗಿದೆ.  ಬಾಲಕಿಯ ಮೇಲೆ ನಾಲ್ವರು ಅಪಹರಿಸಿ ಭೋಪಾಲ್ ಗೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು. ಬಳಿಕ ಊರಿಗೆ ಕರೆತಂದು ಪೊಲೀಸ್ ಠಾಣೆ ಎದುರೇ ಆಕೆಯನ್ನು ಬಿಟ್ಟು ಹೋಗಿದ್ದರು.

ಘಟನೆ ಸಂಬಂಧ ಮರು ದಿನ ಮಹಿಳೆ ತನ್ನ ಅತ್ತೆಯೊಂದಿಗೆ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದು, ಈ ವೇಳೆ ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸ್ ಅಧಿಕಾರಿ ತಿಲಕ್ ಧಾರಿ ಸರೋಜ್ ಬಾಲಕಿಯ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡಿದ್ದು, ಬಾಲಕಿಯನ್ನು ಕೋಣೆಗೆ ಕರೆದೊಯ್ದು ಬಾಲಕಿಯ ಅತ್ತೆಯ ಎದುರೇ ಅತ್ಯಾಚಾರ ಮಾಡಿದ್ದಾನೆ.

ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ಸರೋಜ್ ನನ್ನು ಕರ್ತವ್ಯದಿಂದ ವಜಾಗೊಳಿಸಿದ್ದು, ಆತನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಇನ್ನೂ ಮೊದಲು ಅತ್ಯಾಚಾರ ನಡೆಸಿದ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಂತ್ಯಕ್ರಿಯೆಗೆ ಕೆಲವೇ ನಿಮಿಷ ಇರುವಾಗ ಶವಪೆಟ್ಟಿಗೆಯೊಳಗಿನಿಂದ ಕೇಳಿತು ಬಡಿಯುವ ಶಬ್ದ!

ಕೊನೆಗೂ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ?:  ಏನಿದು ವೈರಲ್ ವಿಡಿಯೋ?

ವಿವಾಹ ವಾರ್ಷಿಕೋತ್ಸವದಂದೇ ಅಪಘಾತದಲ್ಲಿ ಕಾನ್ ಸ್ಟೇಬಲ್ ಸಾವು

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಪ್ರತಿಜ್ಞೆ ಸ್ವೀಕರಿಸಿದ ಬಿಜೆಪಿ ಶಾಸಕ

ಇತ್ತೀಚಿನ ಸುದ್ದಿ