ಆಟಿ ಅಮಾವಾಸ್ಯೆ ಆಚರಣೆ: ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿಯ ವಿಶೇಷತೆ - Mahanayaka

ಆಟಿ ಅಮಾವಾಸ್ಯೆ ಆಚರಣೆ: ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿಯ ವಿಶೇಷತೆ

Ati Amavasya
17/07/2023

ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ ಆಟಿ ಅಮವಾಸ್ಯೆಯಂದು ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿ ಹಿಂದಿನಿಂದಲೂ ಬೆಳೆದು ಬಂದಿದೆ. ಮಲೆನಾಡಿನಲ್ಲಿ ಆಷಾಢ ಮುಗಿದ ನಂತರ ದಕ್ಷಿಣ ಕನ್ನಡದಲ್ಲಿ ಆಶಾಡ ಪ್ರಾರಂಭವಾದ ದಿನ ಈ ಕಷಾಯ ಕುಡಿಯುವ ಪದ್ಧತಿ ಬೆಳೆದು ಬಂದಿದೆ. ಮಲೆನಾಡು ಹಾಗೂ ಕರಾವಳಿ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ಈ ಹಬ್ಬವನ್ನು ಎರಡು ಜಿಲ್ಲೆಗಳಲ್ಲಿ ಆಚರಣೆ ಮಾಡಲಾಗುತ್ತದೆ ಮಲೆನಾಡಿಗರಿಗೆ ಆಷಾಢವು ಒಂದು ತಿಂಗಳ ಮೊದಲೇ ಆಚರಣೆ ಮಾಡಲಾಗುತ್ತದೆ ಕರಾವಳಿಯಲ್ಲಿ ಒಂದು ತಿಂಗಳ ನಂತರ ಪ್ರಾರಂಭವಾಗುತ್ತದೆ ಈ ದಿನ ಹಾಲೆ ಮರ ದಿವ್ಯ ಔಷದಿ ಯಿಂದ ಕೂಡಿರುತ್ತದೆ ಎಂಬುದು ಹಿಂದಿನವರ ನಂಬಿಕೆ..ಏನೇ ಇರಲಿ ಈ ಕಷಾಯವಂತು ದೇಹದ ಆರೋಗ್ಯಕ್ಕೆ ಅತ್ಯುತ್ತಮ ಎನ್ನುದರಲ್ಲಿ ಸಂದೇಹವಿಲ್ಲ..


Provided by

ಈ ಮರವನ್ನು ಗುರುತಿಸುವಲ್ಲಿ ನಾವು ಬಹಳ ಜಾಗರೂಕರಾಗಿರಬೇಕು ..ಹಾಲೆ ಮರವನ್ನು ತಪ್ಪಾಗಿ ಗುರುತಿಸಿ ಮೇಲ್ನೋಟಕ್ಕೆ ಇದೆ ರೀತಿ ಕಾಣುವ ಕಾಸರಕ ಮರದ ಕಷಾಯ ಕುಡಿದು ಅನಾಹುತ ಸಂಭವಿಸಿದ ಹಲವಾರು ನಿದರ್ಶನಗಳಿವೆ..

ಚಿಕ್ಕಮಗಳೂರು ಉಡುಪಿ ,ದಕ್ಷಿಣ ಕನ್ನಡದಲ್ಲಿ  ಒಂದು ವಿಶೇಷ ಸಂಪ್ರದಾಯವಿದೆ.  ಸೂರ್ಯೋದಯಕ್ಕೆ ಮೊದಲೇ ಪಾಲೆ ಮರ (ಹಾಲೆ ಮರ) ದ ಸನಿಹ ಹೋಗಿ ಬಿಳಿ ಕಲ್ಲಿನಿಂದ ಜಜ್ಜಿ ಆ ಮರದ ತೊಗಟೆಯನ್ನು ತೆಗೆದು ಬರಬೇಕು. ತೊಗಟೆಯನ್ನು ತೆಗೆಯುವಾಗ ಕಬ್ಬಿಣದ ಕತ್ತಿಯನ್ನು ತಾಗಿಸಬಾರದು. ಅಂದು ಮನೆಮಂದಿಯೆಲ್ಲರೂ ಆರೋಗ್ಯವರ್ಧಕವಾದ ಪಾಲೆಯ ಅತಿ ಕಹಿಯಾದ ರಸವನ್ನು ಕುಡಿಯುತ್ತಾರೆ. ನಂತರ ತೆಂಗಿನ ಕಾಯಿ ತುರಿ ಹಾಕಿದ ಗಂಜಿ ಉಣ್ಣುತ್ತಾರೆ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by <
Provided by
Provided by
Provided by
Provided by

ವೈಜ್ಞಾನಿಕವಾಗಿ ಈ ಆಚರಣೆಯನ್ನು ಗಮನಿಸಿದರೆ, ಪಾಲೆ ತೊಗಟೆಯ ರಸ ಒಂದು ವರ್ಷದ ಕಾಲ ಯಾವುದೇ ರೋಗ ರುಜಿನಗಳು ದೂರವಾಗುತ್ತದೆ ಎನ್ನುವಂತಹ ನಂಬಿಕೆ ಇದೆ.  ಅನ್ಯ ಆಹಾರ ಸೇವನೆಗೆ ಮೂದಲು ಖಾಲಿ ಹೊಟ್ಟೆಗೆ ಸೇವಿಸುವುದು ಅತೀ ಉತ್ತಮವೆಂದು ತಿಳಿವಳಿಕೆ ಇದೆ. ಈ ರೀತಿ ಸೇವಿಸುವುದರಿಂದ ಅನೇಕ ಬಗೆಯ ಔಷಧಿಗಳು ನಮ್ಮ ಶರೀರಕ್ಕೆ ಸೇರಿತು ಎಂಬ ಬಲವಾದ ನಂಬಿಕೆ ಇಲ್ಲಿ ಗಮನೀಯವೆನಿಸುತ್ತದೆ.

ಹಿಂದಿನ ಕಾಲದಲ್ಲಿ ಆಟಿತಿಂಗಳಿನಲ್ಲಿ ವಿಪರೀತ ಮಳೆ. ಮಳೆಗಾಲದ ಈ ತಿಂಗಳು ಒಂದು ಹೊತ್ತಿನ ಊಟಕ್ಕೂ ಕಷ್ಟವಿತ್ತಂತೆ. ಮಳೆಯಿಂದಾಗಿ ಶರೀರದಲ್ಲಿ ಕಫ ವೃದ್ಧಿಯಾಗಿ ಅಗ್ನಿ ಕುಂಠಿತವಾಗಿರುತ್ತದೆ. ಅಪೌಷ್ಟಿಕತೆಯಿಂದ ರೋಗಗಳೂ ಹೆಚ್ಚು. ಆದ್ದರಿಂದ ಈ ಮಾಸದಲ್ಲಿ ಆಟಿ ಕಳಂಜ ದೈವವು ಅಮಾವಾಸ್ಯೆಯಂದು ಅನೇಕ ಬಗೆಯ ಔಷಧೀಯ ಗುಣಗಳನ್ನು ತಂದು ಮರದಲ್ಲಿರಿಸುತ್ತದೆ. ಯಾರು ತೊಗಟೆಯ ರಸವನ್ನು ನಂಬಿಕೆಯಿಂದ ಸೇವಿಸುತ್ತಾರೆಯೋ ಅವರು ವರ್ಷಪೂರ್ತಿ ಆರೋಗ್ಯವಾಗಿರುತ್ತಾರೆ ಎಂಬ ನಂಬಿಕೆಯೂ ಬಲವಾಗಿದೆ.

ಆಟಿ ಅಮಾವಾಸ್ಯೆ ಹಾಲೆ ಕೆತ್ತೆ ಸಂಗ್ರಹಿಸುವಾಗ ಎಚ್ಚರ:

ಪ್ರಾಯಶಃ ಕರಾವಳಿಯಲ್ಲಿ ಮಳೆ ಹೆಚ್ಚಿಗೆ ಬರುವ ಕಾರಣ ಈ ಸಂಪ್ರದಾಯ ಕರಾವಳಿಯಲ್ಲಿ ಮಾತ್ರ ಚಾಲ್ತಿಯಲ್ಲಿದೆ. ಅದೇ ದಿನ ಮುಂಜಾವ ತೊಗಟೆ ತೆಗೆಯಲು ಹೋಗುತ್ತಾರೆ. ನಸುಕಿನಲ್ಲಿ ಸರಿಯಾಗಿ ತೋರದ ಕಾರಣ ಹಾಲೆ ಮರದ ಬದಲು ಬೇರೊಂದು ಮರದ ಕೆತ್ತೆ ತಂದು ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಯೂ ಇರುವುದರಿಂದ ಜಾಗರೂಕತೆ ವಹಿಸಬೇಕು. ಹಾಲೆ ಮರದ ರೀತಿ ಕಾಣುವ ಕಾಸರ್ಕ (ಕಾಸಾನು) ಮರದ ತೊಗಟೆ ಯನ್ನು ತಂದು ಜೀವಕ್ಕೆ ಅಪಾಯ ಮಾಡಿಕೊಂಡಿರುವ ಉದಾಹರಣೆಗಳು ಇವೆ. ಹಿಂದಿನ ದಿನವೇ ಗುರುತಿಸಿ ಮರುದಿನ ಸಂಗ್ರಹಿಸುವುದು ಉತ್ತಮ. ಇಲ್ಲವಾದರೆ ಹಾಲೆ ಮರದ ಎಲೆಯನ್ನು ಸ್ಪಷ್ಟವಾಗಿ ಗುರುತಿಸಿ ಅದರ ತೊಗಟೆಯನ್ನು ತೆಗೆಯಬೇಕು.

ಹಾಲೆ ಮರವನ್ನು ಆಯುರ್ವೇದದಲ್ಲಿ ಸಪ್ತಪರ್ಣ ಎನ್ನುತ್ತಾರೆ. ಈ ಮರದ ಎಲೆಗಳಲ್ಲಿ ಏಳು ಎಲೆಗಳಿರುವ ಕಾರಣ ಸಪ್ತ ಪರ್ಣ ಎಂದು ಹೆಸರು ಬಂದಿರಬೇಕು. ಹೀಗಾಗಿ ಸಪ್ತಪರ್ಣಿ ಎಂದೂ ಕರೆಯುತ್ತಾರೆ.

ಹಾಲೆ ಮರದಲ್ಲಿ ಜ್ವರ, ಕ್ಯಾನ್ಸರ್‌  ನಂತಹ ಕಾಯಿಲೆಗಳನ್ನು ಗುಣಪಡಿಸುವ ಹಲವು ಬಗೆಯ ಔಷಧೀಯ ಗುಣವಿದೆ. ಆಯುರ್ವೇದ ಔಷಧಿಗಳಲ್ಲಿ ಇದು ಧಾರಾಳವಾಗಿ ಬಳಕೆಯಾಗುತ್ತಿದೆ. ಎಷ್ಟೋ ಔಷಧಿಗಳನ್ನು ಸೇವಿಸುವವರಿಗೆ ಆ ಔಷಧಿಯಲ್ಲಿ ಹಾಲೆ ಮರದ ಅಂಶಗಳಿವೆ ಎನ್ನುವುದೂ ಗೊತ್ತಿರುವುದಿಲ್ಲ. ವಿಶೇಷವೆಂದರೆ ಆಯುರ್ವೇದ ಶಾಸ್ತ್ರದಲ್ಲಿ ಹೇಳಿರುವ ಈ ವಿಚಾರವನ್ನು ಆಯುರ್ವೇದ ತಿಳಿವಳಿಕೆ ಇಲ್ಲದ ಸಾಮಾನ್ಯ ವ್ಯಕ್ತಿಗಳೂ ಪಾಲಿಸುವ ಸಂಸ್ಕೃತಿ ಕಾಣಬಹುದಾಗಿದೆ.

ಗರಿಷ್ಠ ಎಷ್ಟು ಸ್ವೀಕರಿಸಬಹುದು?:

ತೊಗಟೆಯನ್ನು ನೀರು ಮಿಶ್ರ ಮಾಡಿ ಜಜ್ಜಿ ರಸವನ್ನು ತೆಗೆಯುತ್ತಾರೆ. ಇದನ್ನು ವ್ಯಕ್ತಿಯೊಬ್ಬ ಗರಿಷ್ಠ 24 ಮಿ.ಲೀ. ಸೇವಿಸಬಹುದು. ಕುದಿಸಿ ಕಷಾಯ ಮಾಡುವುದಾದರೆ ಗರಿಷ್ಠ 50 ಮಿ.ಲೀ. ಸೇವಿಸಬಹುದು. ಕೆಲವರು ಜೀರಿಗೆ, ಬೆಳ್ಳುಳ್ಳಿ, ಅರಶಿನವನ್ನು ಮಿಶ್ರ ಮಾಡುವುದೂ ಇದೆ.. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಈ ವಿಶಿಷ್ಟ ರೀತಿಯ ಆಚರಣೆ ಇತ್ತೀಚಿನ ದಿನಗಳಲ್ಲಿ ಮೂಡಿಗೆರೆ ಭಾಗದಲ್ಲಿ ಪ್ರಸಿದ್ದಿ ಪಡೆದಿದೆ. ಎಲ್ಲರೂ ಹಾಲೆ ಮರದ ತೊಗಟೆಯ ಕಷಾಯ ಕುಡಿದು  ಸಂಭ್ರಮಿಸಿ..

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ