ಇನ್ನು ಮುಂದೆ ರೈಲಿನಲ್ಲೂ ಎಟಿಎಂ ಸೇವೆ ಲಭ್ಯ!

ಮುಂಬೈ: ಭಾರತೀಯ ರೈಲ್ವೆಯ 172ನೇ ವರ್ಷಾಚರಣೆಯ ಪ್ರಯುಕ್ತ ಪ್ರಾಯೋಗಿಕವಾಗಿ ರೈಲಿನೊಳಗೆ ಎಟಿಎಂ ಯಂತ್ರವನ್ನು ಸ್ಥಾಪಿಸಿದೆ.
ಮುಂಬೈ– ಮನಮಾಡ್ ಪಂಚವಟಿ ಎಕ್ಸ್’ಪ್ರೆಸ್ ರೈಲಿನಲ್ಲಿ ಪ್ರಾಯೋಗಿಕವಾಗಿ ಎಟಿಎಂ ಯಂತ್ರ ಸ್ಥಾಪಿಸಲಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಕೇಂದ್ರ ರೈಲ್ವೆಯ ಮುಂಬೈ ಪ್ರಧಾನ ಕಚೇರಿಯು ಭುಸವಾಲ್ ವಿಭಾಗ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರದ ಸಂಯೋಜನೆಯಲ್ಲಿ ಎಟಿಎಂ ಅನ್ನು ಸ್ಥಾಪಿಸಲಾಗಿದೆ. ರೈಲಿನಲ್ಲಿ ಎಟಿಎಂ ಯಂತ್ರವಿರುವ ವಿಡಿಯೊವನ್ನು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ಪ್ರಯೋಗ ಯಶಸ್ವಿಯಾದರೆ ಹೆಚ್ಚಿನ ರೈಲುಗಳಲ್ಲಿ ಎಂಟಿಎಂ ಯಂತ್ರವನ್ನು ಸ್ಥಾಪಿಸಲಾಗುವುದು. 172 ವರ್ಷಗಳ ಹಿಂದೆ 1853ರಲ್ಲಿ 34 ಕಿ.ಮೀ ನಡುವೆ ಆರಂಭವಾದ ರೈಲು ಸಂಚಾರ ಇಂದು ಜಗತ್ತಿನ ಅತಿ ದೊಡ್ಡ ರೈಲು ಸಂಪರ್ಕ ಜಾಲವಾಗಿ ಬೆಳೆದಿದೆ. ಇದೇ ಹೆಮ್ಮೆಯೊಂದಿಗೆ ಭಾರತೀಯ ರೈಲ್ವೆ ಮುಂದೆ ಸಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD