ಅಟ್ಯಾಕ್: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ - Mahanayaka

ಅಟ್ಯಾಕ್: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ

07/02/2025

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದೆ. ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ. ಮೃತರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟವರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ.
ಉಗ್ರರು ಹಾಗೂ ಯೋಧರ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ.

ಫೆಬ್ರವರಿ 4-5ರ ಮಧ್ಯರಾತ್ರಿ ಎಲ್‌ಒಸಿಯಲ್ಲಿ ಪಾಕಿಸ್ತಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗಡಿಯಾಚೆಗಿನ ಕಾರ್ಯಾಚರಣೆಗಳಿಗಾಗಿ ವಿಶೇಷ ಘಟಕಗಳಾದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಪೋಸ್ಟ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ಸೇನೆಯು ಹೊಂಚು ಹಾಕಿ ದಾಳಿ ನಡೆದೆ ಎಂದು ಮೂಲಗಳು ತಿಳಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ