ಐದು ಆನೆಗಳಿಂದ ದಾಳಿ: ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಯುವಕ ಸಾವು

ಹೆಚ್.ಡಿ ಕೋಟೆ : ಕಾಡಾನೆಗಳ ದಾಳಿಗೆ ಯುವಕ ಬಲಿಯಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದ್ದು, ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಯುವಕ ಆನೆ ದಾಳಿಗೆ ಬಲಿಯಾಗಿದ್ದಾನೆ.
ಸರಗೂರು ತಾಲೂಕು ಸಾಗರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗದ್ದೆಹಳ್ಳ ಗ್ರಾಮದ ಕಾಂತ ನಾಯಕನ ಪುತ್ರ ಅವಿನಾಶ್(22) ಮೃತಪಟ್ಟ ಯುವಕನಾಗಿದ್ದಾನೆ.
ಯುವಕ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಜಮೀನಿಗೆ ನೀರು ಹಾಯಿಸಲು ತೆರಳಿದ ಮೋಟಾರ್ ಸ್ವಿಚ್ ಆನ್ ಮಾಡಿ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಐದು ಆನೆಗಳ ಹಿಂಡು ಎದುರಾಗಿದ್ದು, ಏಕಾಏಕಿ ಯುವಕನ ಮೇಲೆ ದಾಳಿ ನಡೆಸಿವೆ. ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆದ ತಕ್ಷಣ ಮಾಹಿತಿ ನೀಡಿದ್ದರೂ 11 ಗಂಟೆ ಆದರೂ ಅಧಿಕಾರಿಗಳು ಸ್ಥಳಕ್ಕೆ ಬರೆದಿದ್ದ ಕಾರಣ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: