ಔರಂಗಜೇಬನ ಬಲತ್ಕಾರದ ಮತಾಂತರದ ಮನಸ್ಥಿತಿ ಕಾಂಗ್ರೆಸ್ ನ ಮನಸ್ಥಿತಿ: ಸಿ.ಟಿ.ರವಿ ಕಿಡಿ - Mahanayaka
12:34 PM Wednesday 5 - February 2025

ಔರಂಗಜೇಬನ ಬಲತ್ಕಾರದ ಮತಾಂತರದ ಮನಸ್ಥಿತಿ ಕಾಂಗ್ರೆಸ್ ನ ಮನಸ್ಥಿತಿ: ಸಿ.ಟಿ.ರವಿ ಕಿಡಿ

c t ravi
22/06/2023

ಉಡುಪಿ: ಮತಾಂತರ ನಿಷೇಧ ಕಾಯಿದೆಯನ್ನು ವಾಪಾಸ್ಸು ಪಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮನಸ್ಥಿತಿಯು ಔರಂಗಜೇಬನ ಬಲತ್ಕಾರದ ಮತಾಂತರದ ಮನಸ್ಥಿತಿ ಯಾಗಿದೆ. ಔರಂಗಬೇಜನ ವಿಚಾರವನ್ನು ಜೀವಂತವಾಗಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಕಿದಿಯೂರು ಹೋಟೆಲ್ ಶೇಷಶಯನ ಹಾಲ್ನಲ್ಲಿ ಗುರುವಾರ ಆಯೋಜಿಸಲಾದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಕರ್ನಾಟಕದ ಚುನಾವಣೆಯಲ್ಲಿ ಸೋತ ನಾವು ಕೇವಲ ಅಧಿಕಾರ ಮಾತ್ರ ಕಳೆದುಕೊಂಡಿದ್ದೇವೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಸೋತರೆ ಇಡೀ ದೇಶವನ್ನೇ ಕಳೆದುಕೊಳ್ಳಬೇಕಾಗುತ್ತದೆ. ಬಿಜೆಪಿಯನ್ನು ಸೋಲಿಸಲು ತುಕುಡೆ ಗ್ಯಾಂಗ್‌ಗಳು ಸಕ್ರಿಯವಾಗಿದೆ ಎಂದು ಅವರು ದೂರಿದರು.

ಬಿಜೆಪಿ ಕೇವಲ ಅಧಿಕಾರಕ್ಕಾಗಿ ರಾಜಕೀಯ ಮಾಡುವುದಿಲ್ಲ. ದೇಶವನ್ನು ಸ್ವಾವಲಂಬಿ ಹಾಗೂ ವಿಶ್ವಗುರುವನ್ನಾಗಿ ಮಾಡುವುದೇ ಬಿಜೆಪಿಯ ಗುರಿ ಯಾಗಿದೆ. ಅದನ್ನು ಹಾಳು ಮಾಡುವ ಷಡ್ಯಂತರ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದ ಅವರು, ಭಾರತದ ಸಂವಿಧಾನವನ್ನು ಒಪ್ಪುವವರು ಸಮಾನ ನಾಗರಿಕ ಸಂಹಿತೆಯನ್ನು ವಿರೋಧಿಸುವುದಿಲ್ಲ. ಜಿನ್ನಾ ಮಾನಸಿಕತೆ ಇರುವವರು ಮಾತ್ರ ಇದನ್ನು ವಿರೋಧಿಸುತ್ತಿದ್ದಾರೆ ಎಂದರು.

ವಿಧಾನಸಭೆಯ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ದರು. ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ ಅರಗ ಜ್ಞಾನೇಂದ್ರ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರು ರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕರಾದ ಲಾಲಾಜಿ ಆರ್.ಮೆಂಡನ್, ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿದರು. ಮನೋಹರ್ ಕಲ್ಮಾಡಿ ಹಾಗೂ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿದರು,

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ