ಆಟೋ ಹಾಗೂ ಬಸ್ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಹಿತ ಐವರಿಗೆ ಗಾಯ
ಚಾಮರಾಜನಗರ: ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ.
ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), ಮಹದೇವಮ್ಮ(40), ಜಯಲಕ್ಷ್ಮಿ(18), ಸೇರಿದಂತೆ ಮಂಜುಳಾ (40)ರವರು ಗಾಯಗೊಂಡಿದ್ದಾರೆ.
ಮೈಸೂರಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಗೂಡ್ಸ್ ಆಟೋಗೆ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಶುಕ್ರವಾರ ಸಂಜೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋದ ಹಿಂಬದಿಯಲ್ಲಿ ಕುಳಿತಿದ್ದ ಐವರು ಗಾಯಗೊಂಡಿದ್ದಾರೆ.
ಮೂವರನ್ನು ಸ್ಥಳೀಯ ಆಸ್ಪತ್ರೆಗೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw