ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೋರ್ವನನ್ನು ಶೌಚಾಲಯಕ್ಕೆ ಎಳೆದೊಯ್ದು ಅಮಾನವೀಯವಾಗಿ ಥಳಿಸಿ, ವಿವಸ್ತ್ರಗೊಳಿಸಿ, ಆತನ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆ ವೈದ್ಯ ಸಹಿತ ಇಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗಲೂರು ಖಾಸಗಿ ಆಸ್ಪತ್ರೆ ವೈದ್ಯ 45 ವರ್ಷ ವಯಸ್ಸಿನ ರಾಕೇಶ್ ಶೆಟ್ಟಿ ಹಾಗೂ 30 ವರ್ಷ ವಯಸ್ಸಿನ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 26 ವರ್ಷ ವಯಸ್ಸಿನ ಮುರಳಿ ಎಂಬ ಆಟೋ ಚಾಲಕ ಹಲ್ಲೆಗೊಳಗಾದ ಆಟೋ ಚಾಲಕ ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವೈದ್ಯ ರಾಕೇಶ್ ಶೆಟ್ಟಿ ಹಾಗೂ ಆಟೋ ಚಾಲಕ ಮುರಳಿ ಪರಿಚಿತರು ಎನ್ನಲಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ನ.4ರಂದು ವೈದ್ಯ ರಾಕೇಶ್ ಶೆಟ್ಟಿ ಹಾಗೂ ಸ್ನೇಹಿತರು ಕಂಟ್ರಿ ಕ್ಲಬ್ ನಲ್ಲಿ ಪಾರ್ಟಿ ಮಾಡಿದ್ದರು. ಮುರಳಿ ಸಹ ಪಾರ್ಟಿಯಲ್ಲಿ ಭಾಗವಹಿಸಿದ್ದ. ಈ ವೇಳೆ ಬಿರಿಯಾನಿ ಪಾರ್ಸೆಲ್ ತರಲು ಮುರಳಿಯನ್ನು ಕಳುಹಿಸಲಾಗಿತ್ತು. ಬಿರಿಯಾನಿ ತಂದ ಬಳಿಕ ಡಾ.ಸ್ವಾಮಿ ಅವರನ್ನು ಕರೆತರುವಂತೆ ಮುರಳಿಯನ್ನು ಕಳುಹಿಸಲಾಗಿದೆ.
ಡಾ.ಸ್ವಾಮಿಯನ್ನು ಮುರಳಿ ಕರೆತಂದ ವೇಳೆ ಇವರ ನಡುವೆ ಜಗಳವಾಗಿದೆ. ಡಾ.ಸ್ವಾಮಿಯ ಆಸ್ಪತ್ರೆಯಲ್ಲಿ ರೋಗಿಗಳ ಎದುರು ಮುರಳಿ ಕೆಟ್ಟದಾಗಿ ನಡೆದುಕೊಂಡ ಎಂದು ಸ್ವಾಮಿ ಆರೋಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಡಾ.ರಾಕೇಶ್ ಶೆಟ್ಟಿ ಹಾಗೂ ಇತರರು ಮುರಳಿ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ, ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ಆತನ ಮೇಲೆ ಮೂತ್ರ ವಿಸರ್ಜಿಸಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇತರರ ಬಂಧನಕ್ಕೆ ಬಲೆ ಬೀಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಲಖಿಂಪುರ ಖೇರಿ ಹಿಂಸಾಚಾರ ಬಿಜೆಪಿಗೆ ಹಾನಿಯುಂಟು ಮಾಡಬಹುದು | ಸಮೀಕ್ಷೆ
ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ
ದೇಶ ವಿಭಜನೆಯಾಗಲು ಅಂದಿನ ಕಾಂಗ್ರೆಸ್ ನಾಯಕರೇ ಕಾರಣ | ಅಸಾದುದ್ದಿನ್ ಓವೈಸಿ ಗುಡುಗು
KSRTC ಬಸ್ ನಲ್ಲಿ ಜೋರಾಗಿ ಹಾಡು ಹಾಕಿದರೆ ಶಿಸ್ತು ಕ್ರಮ: ಶಿಕ್ಷೆ ಏನು ಗೊತ್ತಾ?
ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿಗೆ ಸಿಎಂ ಸ್ಟಾಲಿನ್ ಅಭಿನಂದನೆ