ಎರಡು ಆಟೋಗಳಿಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ - Mahanayaka

ಎರಡು ಆಟೋಗಳಿಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

udupi
12/10/2022

ಉಡುಪಿ: ಗೂಡ್ಸ್ ವಾಹನವೊಂದು ಎರಡು ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕೋಟ ಸರ್ಕಲ್ ನಲ್ಲಿ ಇಂದು ನಡೆದಿದೆ.

ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟುತ್ತಿದ್ದ ರಿಕ್ಷಾಕ್ಕೆ ಕುಂದಾಪುರ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಆ ಬಳಿಕ ಎಡಬದಿಯ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸಾಗುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಗೂಡ್ಸ್ ವಾಹನದಲ್ಲಿದ್ದ ಬಾಕ್ಸ್ ಗಳು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾಗಿವೆ. ಎರಡು ರಿಕ್ಷಾಗಳು ಜಖಂಗೊಂಡಿವೆ. ಅಪಘಾತದ ರಭಸಕ್ಕೆ ರಿಕ್ಷಾ ಚಾಲಕ ರಿಕ್ಷಾದಿಂದ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಗಾಯಗೊಂಡಿದ್ದಾನೆ ಎನ್ನಲಾಗಿದೆ. ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ‌.


Provided by

 

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ