ಅವಸರದಿಂದ ದೇವಸ್ಥಾನಗಳನ್ನು ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ - Mahanayaka
10:59 PM Tuesday 14 - October 2025

ಅವಸರದಿಂದ ದೇವಸ್ಥಾನಗಳನ್ನು ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

basavaraj bommai
14/09/2021

ಬೆಂಗಳೂರು: ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


Provided by

ಮಂಗಳವಾರ ಬೆಂಗಳೂರಿನಲ್ಲಿ ಕೊವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಅವಸರದ ತೀರ್ಮಾನ ತೆಗೆದುಕೊಂಡು ದೇವಸ್ಥಾನಗಳನ್ನು ಒಡೆಯುವ ಕೆಲಸ ಮಾಡಬಾರದು. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚಿಸಿ ಎರಡು ದಿನಗಳಲ್ಲಿ ನಿರ್ದಿಷ್ಟ ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ವರ ನೀರು ತರಲು ಹೋಗಿ ವಾಪಸ್ ಬರುವಷ್ಟರಲ್ಲಿ ನವವಧು ಎಸ್ಕೇಪ್!

ಮಸೀದಿ, ಚರ್ಚ್, ದೇವಸ್ಥಾನ ಅಂತ ಇಲ್ಲ,  ಯಾವುದೇ ಇದ್ದರೂ ತೆರವು ಮಾಡುತ್ತೇವೆ | ರಾಮನಗರ ಡಿಸಿ

ನೀವು ಲಿಂಬೆ ಸೋಡಾವನ್ನು ಅತೀಯಾಗಿ ಕುಡಿಯುತ್ತೀರಾ? | ಹಾಗಿದ್ದರೆ, ಈ ವಿಚಾರ ನೀವು ತಿಳಿಯಲೇ ಬೇಕು

RPI: ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣ | ತುಮಕೂರು ಜಿಲ್ಲಾ ಮಟ್ಟದ ಕಾರ್ಯಕರ್ತರ ಕಾರ್ಯಾಗಾರ

ಆಸ್ತಿಗಾಗಿ ಸಹೋದರರ ಜಗಳ: ಕಟ್ಟಡದ ಮೇಲಿನಿಂದ ಓರ್ವ ಸಹೋದರನನ್ನು ಕೆಳಕ್ಕೆಸೆಯಲು ಯತ್ನ

ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಮಾಡಿ, ಬೆದರಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದರೂ, ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ | ಯಡಿಯೂರಪ್ಪ

ಇತ್ತೀಚಿನ ಸುದ್ದಿ