ಇದು 32 ವರ್ಷಗಳ ಹಳೆಯ ಮರ್ಡರ್ ಕೇಸ್: ಆರೋಪಿ ರಾಜಕಾರಣಿ ಅನ್ಸಾರಿಗೆ ಶಿಕ್ಷೆ - Mahanayaka

ಇದು 32 ವರ್ಷಗಳ ಹಳೆಯ ಮರ್ಡರ್ ಕೇಸ್: ಆರೋಪಿ ರಾಜಕಾರಣಿ ಅನ್ಸಾರಿಗೆ ಶಿಕ್ಷೆ

05/06/2023

ಅದು 1991ರ ಆಗಸ್ಟ್ 3. ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್​​ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂನ್ನು ಎಫ್‌ಐಆರ್‌ನಲ್ಲಿ ಹೆಸರಿಸಿದ್ದರು.


Provided by

ಇದೀಗ 1991ರಲ್ಲಿ ನಡೆದ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​​ಸ್ಟರ್ ,ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಇಂದು ವಾರಣಾಸಿಯ ವಿಶೇಷ ಎಂಪಿ/ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

32 ವರ್ಷಗಳಷ್ಟು ಹಳೆಯದಾದ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ವಾರಣಾಸಿಯ ನ್ಯಾಯಾಲಯವು ಜೈಲಿನಲ್ಲಿರುವ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಮತ್ತು 1,00,000 ದಂಡ ವಿಧಿಸಿದೆ. ಅವಧೇಶ್ ಕೊಲೆ ನಡೆದಾಗ ಮುಖ್ತಾರ್ ಅನ್ಸಾರಿ ಶಾಸಕರಾಗಿರಲಿಲ್ಲ. ತೀರ್ಪು ಪ್ರಕಟವಾಗುವ ಮುನ್ನ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.


Provided by

ಅನ್ಸಾರಿ ವಿರುದ್ಧದ 61 ಕ್ರಿಮಿನಲ್ ಪ್ರಕರಣಗಳಲ್ಲಿ ಇದು ಐದನೇ ಶಿಕ್ಷೆಯಾಗಿದೆ. ಈತನ ವಿರುದ್ಧ ರಾಜ್ಯದ ವಿವಿಧೆಡೆ ಇನ್ನೂ 20 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಐದು ಬಾರಿ ಶಾಸಕರಾಗಿರುವ ಮುಖ್ತಾರ್ ಅನ್ಸಾರಿಗೆ ಈ ಏಪ್ರಿಲ್‌ನಲ್ಲಿ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ