ಅಯೋಧ್ಯೆಯ ಮಸೀದಿಗೆ ವೀರ ಸ್ವಾತಂತ್ರ್ಯ ಹೋರಾಟಗಾರನ ಹೆಸರಿಡಲು ನಿರ್ಧಾರ
06/06/2021
ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಗೆ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಅವರ ಹೆಸರನ್ನಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ಕಾರ್ಯದರ್ಶಿ ಅಥರ್ ಹುಸೇನ್ ಈ ವಿಚಾರವನ್ನು ತಿಳಿಸಿದ್ದು, ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಗೆ ಸ್ವಾತಂತ್ರ್ಯ ಹೋರಾಟಗಾರ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಅವರ ಹೆಸರನ್ನಿಡಲಾಗುವುದು ಎಂದು ಹೇಳಿದ್ದಾರೆ.
ಈ ನಿರ್ಧಾರವನ್ನು ಹುತಾತ್ಮರ ದಿನದಂದೇ ಕೈಗೊಳ್ಳಲಾಗಿದೆ. ಈ ಮಸೀದಿಯಲ್ಲಿ ಆಸ್ಪತ್ರೆ, ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ ಹಾಗೂ ಸಮುದಾಯ ಅಡುಗೆ ಮನೆಗಳಿರಲಿದೆ ಎಂದು ಅವರು ತಿಳಿಸಿದ್ದಾರೆ.
ಅಹ್ಮದುಲ್ಲಾ ಷಾ ಫೈಜಾಬಾದಿ ಅವರು 1857ರ ದಂಗೆಯಲ್ಲಿ ಕಾನ್ಪುರದ ನಾನಾ ಸಾಹೇಬ್, ಅರಾಹ್ ನ ಕುನ್ವರ್ ಸಿಂಗ್ ಹಾಗೂ ಇತ್ತಿತರ ಜೊತೆ ಸೇರಿ ಬ್ರಿಟೀಷರ ವಿರುದ್ಧ ಹೋರಾಡಿದ್ದರು. ಈ ಸಂದರ್ಭದಲ್ಲಿ ಅವರು ಈ ಹೋರಾಟದಲ್ಲಿ ಮಡಿದಿದ್ದಾರೆ.