ಅಯ್ಯಪ್ಪ ಮಾಲಾಧಾರಿಗಳ ಕಾರು ಭೀಕರ ಅಪಘಾತ: ಇಬ್ಬರು ಸಾವು - Mahanayaka

ಅಯ್ಯಪ್ಪ ಮಾಲಾಧಾರಿಗಳ ಕಾರು ಭೀಕರ ಅಪಘಾತ: ಇಬ್ಬರು ಸಾವು

ayyappa
09/01/2024

ವಿಜಯನಗರ: ಅಯ್ಯಪ್ಪ ಮಾಲಾಧಾರಿಗಳ ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ  ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ನಡೆದಿದೆ.


Provided by

ಚೆನ್ನು ಪಾಟೀಲ (26), ಯುವರಾಜ (28) ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗದಗ ಜಿಲ್ಲೆಯಿಂದ ಕೇರಳಕ್ಕೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಮಂಜು, ವೀರಣ್ಣ, ಚಿದಂಬರಂ ಎಂಬ ಮೂವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Provided by

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಖಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಇತ್ತೀಚಿನ ಸುದ್ದಿ