ಆಜಾದ್ ಕಾಶ್ಮೀರ ನಮ್ಮ ಅವಿಭಾಜ್ಯ ಅಂಗವಲ್ಲ: ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ
![](https://www.mahanayaka.in/wp-content/uploads/2024/06/bba243ea76f993efa8627d9239173f302686c819260a94c10f6dba0de0e1ead1.0.jpg)
ಆಜಾದ್ ಕಾಶ್ಮೀರ ಅಥವಾ ಪಾಕ್ ಆಕ್ರಮಿತ ಕಾಶ್ಮೀರ ಪಿಒಕೆ ದೇಶದ ಅವಿಭಾಜ್ಯ ಅಂಗವಲ್ಲ ಎಂದು ಕೊನೆಗೂ ಪಾಕಿಸ್ತಾನ ಒಪ್ಪಿಕೊಂಡಿದೆ. ಈ ಬಗ್ಗೆ ಸರ್ಕಾರಿ ವಕೀಲರೊಬ್ಬರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದು, ಈ ಘಟನೆ ಇಡೀ ಪಾಕ್ ನಲ್ಲೇ ಸಂಚಲನ ಮೂಡಿಸಿದೆ.
ಪಿಒಕೆ ವಿದೇಶಿ ಪ್ರದೇಶವಾಗಿದ್ದು, ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸಲ್ಪಟ್ಟಿದೆ. ಆದರೆ ಪಾಕಿಸ್ತಾನವು ಆಜಾದ್ ಕಾಶ್ಮೀರ ಎಂದು ಹೇಳಿಕೊಂಡು ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂಬುದಾಗಿ ವಕೀಲರು ಪ್ರತಿಪಾದಿಸಿದ್ದಾರೆ.
ಅಪಹರಣಕ್ಕೊಳಗಾದ ಕವಿ ಹಾಗೂ ಪತ್ರಕರ್ತ ಅಹ್ಮದ್ ಫರ್ಹಾದ್ ರನ್ನು ಜೂನ್ 2ರ ವರೆಗೆ ಕಾಶ್ಮೀರದಲ್ಲಿ ಬಂಧನದಲ್ಲಿರಿಸಲಾಗಿದೆ. ಪಿಒಕೆಯು ವಿದೇಶಿ ಪ್ರದೇಶ ಆಗಿರುವುದರಿಂದ ಅವರನ್ನ ಇಸ್ಲಾಮಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಿಲ್ಲ ಎಂದು ವಕೀಲರು ವಾದ ಮಂಡಿಸಿದ್ದಾರೆ.
ವಕೀಲರ ವಾದವನ್ನು ಆಲಿಸಿದ ಇಸ್ಲಾಮಾಬಾದ್ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಆಜಾದ್ ಕಾಶ್ಮೀರವು ವಿದೇಶಿ ನೆಲವಾಗಿದ್ದರೆ, ಪಾಕಿಸ್ತಾನದ ಅವಿಭಾಜ್ಯ ಅಂಗವಲ್ಲ ಎನ್ನುವುದಾದರೆ ಪಾಕಿಸ್ತಾನದ ಮಿಲಿಟರಿ ಮತ್ತು ಪಾಕಿಸ್ತಾನಿ ರೇಂಜರ್‌ಗಳು ಪಾಕ್‌ನಿಂದ ಹೇಗೆ ಅಲ್ಲಿಗೆ ಪ್ರವೇಶಿಸಿದರು ಎಂದು ಪ್ರಶ್ನೆ ಮಾಡಿದೆ.
ಪಾಕ್ ಆಕ್ರಮಿತ ಕಾಶ್ಮೀರದ ಸ್ಥಾನಮಾನದ ಕುರಿತು ನ್ಯಾಯಾಲಯದಲ್ಲಿ ವಾದ ಮಂಡಿಸಿದ ವಕೀಲರ ವಿರುದ್ಧ ಪಾಕ್ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth