ಉಗ್ರನನ್ನು ಸಮರ್ಥಿಸುವವರು, ಅನೈತಿಕ ಪೊಲೀಸ್ ಗಿರಿ ಮಾಡುವವರು ಇಬ್ಬರೂ ಒಂದೇ: ಎಎಪಿ ಮುಖಂಡ ಅಝ್ಫರ್ ರಜಾಕ್ 

azfar razak
19/12/2022

ಮಂಗಳೂರು: ಉಗ್ರರನ್ನು ಸಮರ್ಥಿಸುವವರು, ಅನೈತಿಕ ಪೊಲೀಸ್ ಗಿರಿ ನಡೆಸುವವರು ಇಬ್ಬರೂ ಒಂದೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ   ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಝ್ಫರ್ ರಜಾಕ್ ಹೇಳಿದ್ದಾರೆ.

ಚುನಾವಣೆ ಹತ್ತಿರ ಇರುವಾಗ ದಕ್ಷಿಣ ಕನ್ನಡದ ಅಲ್ಲಲ್ಲಿ ಅನೈತಿಕ ಪೋಲಿಸ್‌ ಗಿರಿ ನಡೆಸಿ ಅಮಾಯಕರನ್ನು ಬಡಿದು ವಿಜೃಂಭಿಸುತ್ತಿರುವುದು ಕಂಡು ಬಂದಿದೆ. ಚುನಾವಣಾ ಅಸ್ತ್ರವಾಗಿ ಅಮಾಯಕರ ಮಾರಣಹೋಮ ನಡೆಸುವರು ಮತ್ತು ಕೊಲ್ಲಲು ಬಂದ ಉಗ್ರನನ್ನು ಹೊಗಳುತ್ತಾ ಮತಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳಲು ಪ್ರಯತ್ನಿಸುತ್ತಿರುವ ಎರಡೂ ರಾಷ್ಟ್ರೀಯ ಪಕ್ಷಗಳ ರಾಜ್ಯಾಧ್ಯಕ್ಷರ ಹೇಳಿಕೆಗಳನ್ನು ಖಂಡಿಸುವುದಾಗಿ ಅವರು ಹೇಳಿದರು.

ಈ ಎರಡೂ ರಾಷ್ಟ್ರೀಯ ಪಕ್ಷಗಳು ಒಂದು ನಾಣ್ಯದ ಎರಡು ಮುಖಗಳು ಎಂದು ಅಝ್ಫರ್ ರಜಾಕ್ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version