ಬಿ.ಎಲ್.ಸಂತೋಷ್ ಗೆ ಸಿಎಂ ಸ್ಥಾನ ಇಲ್ಲ? | ಸಿಎಂ ಸ್ಥಾನ ಕೈತಪ್ಪಲು ಜವಾಬ್ದಾರಿಗಳೇ ಕಾರಣವಾಗುತ್ತಾ?
ಬೆಂಗಳೂರು: ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಸದ್ಯ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಕಸರತ್ತುಗಳು ನಡೆಯುತ್ತಿವೆ. ಇಂದು ಬೆಳಗ್ಗಿನಿಂದಲೇ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸದ್ಯ ರಾಜ್ಯಕ್ಕೆ ಕೇಂದ್ರದಿಂದ ಆಗಮಿಸಿರುವ ವೀಕ್ಷಕರು ರಾತ್ರಿ 7 ಗಂಟೆಗೆ ಪಕ್ಷದ ಶಾಸಕರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಿಎಂ ಆಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಇದೀಗ ಬಿ.ಎಲ್.ಸಂತೋಷ್ ಅವರು ಸಿಎಂ ರೇಸ್ ನಲ್ಲಿಲ್ಲ ಎಂದು ಹೇಳಲಾಗುತ್ತಿದೆ. ಮಾಹಿತಿಗಳ ಪ್ರಕಾರ ಉತ್ತರಪ್ರದೇಶ ಚುನಾವಣೆ ಸಮೀಪದಲ್ಲಿದ್ದು, ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ಬಿ.ಎಲ್.ಸಂತೋಷ್ ಜವಾಬ್ದಾರಿ ವಹಿಸಿಕೊಂಡಿರುವುದರಿಂದಾಗಿ ಅವರು ಸಿಎಂ ಆಗಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.
ಬಿ.ಎಲ್.ಸಂತೋಷ್ ಅವರನ್ನು ನೇಮಕ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಆಗಲಿ, ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಕೂಡ ಯಾವುದೇ ಸಮ್ಮತಿಯನ್ನು ಸೂಚಿಸಿಲ್ಲ ಎಂದು ಹೇಳಲಾಗುತ್ತಿದೆ. ಪಕ್ಷ ಸಂಘಟನೆಗೆ ಬಿ.ಎಲ್.ಸಂತೋಷ್ ಅತ್ಯಗತ್ಯವಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಅವರನ್ನು ಕೂರಿಸಲು ಹೈಕಮಾಂಡ್ ಮುಂದೆ ಬಂದಿಲ್ಲ ಎಂದು ಹೇಳಲಾಗಿದೆ.’
ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾಗಿರುವ ಸಿಎಂ ಸ್ಥಾನಕ್ಕೆ ಯಾರು ಸೂಕ್ತ ಎನ್ನುವ ಚರ್ಚೆಗಳ ನಡುವೆಯೇ ಹಲವು ಹೆಸರುಗಳನ್ನು ಸೂಚಿಸಲಾಗುತ್ತಿದೆ. ಅಂತಿಮವಾಗಿ ಯಾರು ಸಿಎಂ ಆಗಲಿದ್ದಾರೆ ಎನ್ನುವುದು ಇಂದು ರಾತ್ರಿ ಅಥವಾ ನಾಳೆ ಬೆಳಗ್ಗಿನೊಳಗೆ ಬಹಿರಂಗವಾಗುವ ಸಾಧ್ಯತೆಗಳಿವೆ ಎನ್ನುವ ಮಾಹಿತಿಗಳು ಇದೀಗ ಲಭ್ಯವಾಗಿದೆ.
ಇನ್ನಷ್ಟು ಸುದ್ದಿಗಳು…
ಹೊಸ ಸಿಎಂ ಹೆಸರು ಘೋಷಣೆಗೆ ಕೌನ್ ಡೌನ್ ಶುರು: ಇಂದು ರಾತ್ರಿಯೇ ಹೊಸ ಸಿಎಂ ಘೋಷಣೆ?
ಪತ್ನಿಯ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದ ಯುವಕನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ ಪತಿ!
ವಿಲನ್ ಗಳಾದರು ಹೈಕಮಾಂಡ್! | ಲಿಂಗಾಯತ ನಾಯಕನನ್ನು ಅವಮಾನಿಸಿ ಕೆಳಗಿಳಿಸಿದ್ಯಾಕೆ?
ಯಡಿಯೂರಪ್ಪ ಕಣ್ಣೀರು ನೋಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ರಾಜಾಹುಲಿ!
ಫೋಟೋ ಶೇರ್ ಮಾಡಿದ ಕೆಲವೇ ನಿಮಿಷಗಳಲ್ಲಿ ಸಾವನ್ನಪ್ಪಿದ ಆಯುರ್ವೇದ ವೈದ್ಯೆ!