ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಬಿ.ಎಲ್.ಸಂತೋಷ್ ಹೇಳಿಕೆ: ಹಾಲಿ ಶಾಸಕರಿಗೂ ಭೀತಿ! - Mahanayaka
8:00 AM Wednesday 5 - February 2025

ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಬಿ.ಎಲ್.ಸಂತೋಷ್ ಹೇಳಿಕೆ: ಹಾಲಿ ಶಾಸಕರಿಗೂ ಭೀತಿ!

b l santhosh
02/05/2022

ಬೆಂಗಳೂರು:  ಬಿಜೆಪಿಯಲ್ಲಿ ಮುಂದಿನ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಬಗ್ಗೆ  ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ನೀಡಿದ ನಂತರ ಬಿಜೆಪಿಯ ಹಿರಿಯ ನಾಯಕರಿಗೆ ಭೀತಿ ಸೃಷ್ಟಿಯಾಗಿದ್ದು, ಸಂತೋಷ್ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರು  ಮಹತ್ವದ ಸಭೆ ನಡೆಸಿದ್ದಾರೆ.

ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಹಲವು ನಾಯಕರ ಸಭೆಯಲ್ಲಿ ಭಾಗವಹಿಸಿದ್ದು, ಸುಮಾರು ಎರಡೂವರೆ ಗಂಟೆಗಳ ಕಾಲ ಚರ್ಚೆ ನಡೆದಿದೆ ಎಂದು ವರದಿಯಾಗಿದೆ.

ಮೈಸೂರಿನಲ್ಲಿ ಶನಿವಾರ ಮಾತನಾಡಿದ್ದ ಬಿ.ಎಲ್.ಸಂತೋಷ್, ಪಕ್ಷದ ಕಾರ್ಯಕರ್ತರಿಗೆ, ಹೊಸ ಮುಖಗಳಿಗೆ ಅವಕಾಶ ನೀಡುವ ಪ್ರಯೋಗಕ್ಕೆ ಕೈ ಹಾಕುವ ಧೈರ್ಯವನ್ನು ಬಿಜೆಪಿ ತೋರುತ್ತಿದೆ. ಪಕ್ಷ ಸಂಘಟನೆಗಳಿಗಾಗಿ ದುಡಿದ ಹೊಸ ಮುಖಗಳಿಗೆ ಅವಕಾಶ ನೀಡುವುದಾಗಿ ಅವರು ಹೇಳಿಕೆ ನೀಡಿದ್ದರು.

ಈ ಹೇಳಿಕೆ ಕಮಲ ಪಾಳಯದಲ್ಲಿ ಸಂಚಲನ ಮೂಡಿಸಿದ್ದು, ಹಾಲಿ ಶಾಸಕರಿಗೂ ಮುಂದಿನ ಭವಿಷ್ಯದ ಬಗ್ಗೆ ಚಿಂತೆಯನ್ನುಂಟು ಮಾಡಿದೆ. ಆದರೆ ಪಕ್ಷದ ಕಾರ್ಯಕರ್ತರು ಬಿ.ಎಲ್.ಸಂತೋಷ್ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶಾವರ್ಮಾ ಸೇವಿಸಿ 16 ವರ್ಷದ ಬಾಲಕಿ ಸಾವು: 36 ಮಂದಿ ಅಸ್ವಸ್ಥ

ಆ್ಯಸಿಡ್ ದಾಳಿ ಆರೋಪಿ ನಾಗೇಶ್ ನ ಬೈಕ್ ಪತ್ತೆ!

ಕೆಲಸಕ್ಕೆ ಸೇರಿದ ದಿನವೇ ನರ್ಸ್ ಮೇಲೆ ಅತ್ಯಾಚಾರ, ಬರ್ಬರ ಹತ್ಯೆ!

ಬಸ್ಸಿನಿಂದ  ಕೆಸರು ಹಾರಿದ್ದಕ್ಕೆ ಚಾಲಕನಿಗೆ ವ್ಯಕ್ತಿಯಿಂದ ಚಪ್ಪಲಿಯೇಟು!

ಪಿಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್!

ಪರೋಟ ಸೇವಿಸಿದ ಬಾಲಕನ ದಾರುಣ ಸಾವು: ಪೋಷಕರಿಗೆ ಕಾದಿತ್ತು ಶಾಕಿಂಗ್ ನ್ಯೂಸ್!

ಇತ್ತೀಚಿನ ಸುದ್ದಿ