ಬಿ.ವೈ.ವಿಜಯೇಂದ್ರ ಆಪ್ತ ಗೆಳೆಯನ ಮನೆಯ ಮೇಲೂ ಐಟಿ ದಾಳಿ! - Mahanayaka

ಬಿ.ವೈ.ವಿಜಯೇಂದ್ರ ಆಪ್ತ ಗೆಳೆಯನ ಮನೆಯ ಮೇಲೂ ಐಟಿ ದಾಳಿ!

yediurappa vijayendra
08/10/2021


Provided by

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಉಮೇಶ್ ನಿವಾಸದ ಮೇಲೆ ಕರ್ನಾಟಕ-ಗೋವಾ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಆಪ್ತ ಗೆಳೆಯನ ಮನೆಯ ಮೇಲೆಯೂ ಐಟಿ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಬಿ ವೈ ವಿಜಯೇಂದ್ರ ಆಪ್ತ ಹಾಗೂ ಗೆಳೆಯ ಅರವಿಂದ ಮನೆ ಮೇಲೆ ಐಟಿ ದಾಳಿ ನಿನ್ನೆ ದಾಳಿ ನಡೆದಿದೆ ಎನ್ನಲಾಗಿದೆ. ಅರವಿಂದ್ ಮತ್ತು ವಿಜಯೇಂದ್ರ ಕ್ಲಾಸ್ ಮೇಟ್ಸ್​​. ವಸಂತ ನಗರದಲ್ಲಿ ವಾಸವಿರುವ ಅರವಿಂದ ಮನೆ ಮೇಲೆ ಐಟಿ ರೇಡ್​ ನಡೆದಿತ್ತು. ಅರವಿಂದ್​ ಜಯನಗರದಲ್ಲಿ ಸ್ವಂತ ಮನೆ ಹೊಂದಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.

ಹೊಸ ಮನೆ ಕಟ್ಟಲು ಉದ್ದೇಶಿಸಿದ್ದರ ಅರವಿಂದ್  ವಸಂತ ನಗರ ಮನೆಗೆ ಶಿಫ್ಟ್​ ಆಗಿದ್ದರು. ಪ್ರಸ್ತುತ ಅರವಿಂದ್ ದುಬೈಗೆ ತೆರಳಿದ್ದರು. ಆದರೆ ಇಂದು ದುಬೈನಿಂದ ಬೆಂಗಳೂರಿಗೆ ವಾಪಸಾಗಿದ್ದಾರೆ. ವಸಂತ ನಗರದ ಅರವಿಂದ್ ಫ್ಲಾಟ್ ನಲ್ಲಿ ಅವರ ತಂದೆ ಮತ್ತು ತಾಯಿ ಇದ್ದರು. ಇಂದು ಅರವಿಂದ ಸಮ್ಮಖದಲ್ಲಿ ಐಟಿ ಅಧಿಕಾರಿಗಳ ತಂಡ ಮನೆಯನ್ನು ಸರ್ಚ್ ಮಾಡಲಿದೆ ಎಂದು ತಿಳಿದು ಬಂದಿದೆ.

ಯಡಿಯೂರಪ್ಪ ಹಾಗೂ ಅವರ ಸುತ್ತ ನಡೆಯುತ್ತಿರುವ ಐಟಿ ದಾಳಿಗಳು ರಾಜಕೀಯ ಬಣ್ಣವನ್ನು ಪಡೆದುಕೊಂಡಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದರೂ, ಬಿಜೆಪಿಯಲ್ಲಿ ಅವರ ಪ್ರಭಾವ ಕಡಿಮೆಯಾಗಿಲ್ಲ. ಹೀಗಾಗಿ ಐಟಿ ದಾಳಿಯ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಯೋಗ ಶಿಕ್ಷಕನಿಂದ ಯುವತಿಯ ಅತ್ಯಾಚಾರ: ಯೋಗದ ಹೆಸರಿನಲ್ಲಿ ಶಿಕ್ಷಕನ ಕಾಮಲೀಲೆ ಬಯಲು

ಮದುವೆಯಾದ ಬಳಿಕ ನರಕ ತೋರಿಸಿದ ಪತಿ | ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ

ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ!

ಸುಬ್ರಮಣಿಯನ್ ಸ್ವಾಮಿ, ವರುಣ್ ಗಾಂಧಿಗೆ ಕಾರ್ಯಕಾರಿಣಿಯಿಂದ ಗೇಟ್ ಪಾಸ್ ನೀಡಿದ ಬಿಜೆಪಿ!

ಬಿಜೆಪಿ ನಾಯಕರು ಕಾರಿನಲ್ಲಿ ಬರುವ ವೇಳೆ ಎಚ್ಚರವಾಗಿರಿ | ಸಾರ್ವಜನಿಕರಿಗೆ ಡಿ.ಕೆ.ಶಿವಕುಮಾರ್ ಸಲಹೆ

ತನ್ನನ್ನು ಸಾಕಿದ ವ್ಯಕ್ತಿಯ ಮಡಿಲಿನಲ್ಲಿಯೇ ಪ್ರಾಣ ಬಿಟ್ಟ ಗೊರಿಲ್ಲ: ನೆಟ್ಟಿಗರ ಹೃದಯ ಕರಗಿಸಿದ ಫೋಟೋ

ಆಸ್ಪತ್ರೆ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಹೊಸ ತಿರುವು: ಮೊಬೈಲ್ ನಲ್ಲಿ ಪತ್ತೆಯಾದ ಫೋಟೋಗಳಿಂದ ರಹಸ್ಯ ಬಯಲು

 

ಇತ್ತೀಚಿನ ಸುದ್ದಿ