ದಿಲ್ಲಿ ಮಸೂದೆಗೆ ಅನುಮೋದನೆ: ಇದೊಂದು ಕರಾಳ ದಿನ ಎಂದು ಕೇಜ್ರಿವಾಲ್ ಗರಂ
ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಇದೊಂದು ದೇಶದ ಇತಿಹಾಸದಲ್ಲಿ ಕರಾಳ ದಿನ ಎಂದು ಕಿಡಿಕಾರಿದ್ದಾರೆ.
ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಕೇಜ್ರಿವಾಲ್, ‘ದೇಶದ ಇತಿಹಾಸದಲ್ಲಿ ಇಂದು ಕರಾಳ ದಿನ. ಸರ್ಕಾರಕ್ಕೆ ಕೆಲಸ ಮಾಡುವ ಅಧಿಕಾರವಿಲ್ಲ. ಸುಪ್ರೀಂ ಕೋರ್ಟ್‌ನಲ್ಲೂ ನನಗೆ ನಂಬಿಕೆ ಇಲ್ಲ ಎಂದು ಪ್ರಧಾನಿ ಹೇಳುತ್ತಿರುವುದು ಸ್ಪಷ್ಟವಾಗಿದೆ. ದೆಹಲಿ ಸರ್ಕಾರಿ ನೌಕರರ ಎಲ್ಲಾ ನೀತಿಗಳನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಅವರು ಹೇಳಿದರು.
ನೀವು ದೆಹಲಿಯಲ್ಲಿ ಏಕೆ ಹಸ್ತಕ್ಷೇಪ ಮಾಡುತ್ತಿದ್ದೀರಿ. ಅಮಿತ್ ಶಾ ಜೀ, ದೆಹಲಿಯ ಜನರ ಹಕ್ಕುಗಳನ್ನು ಕೊಲ್ಲಲು ನಿಮಗೆ ಅಧಿಕಾರ ನೀಡಲಿಲ್ಲ. ದೆಹಲಿ ಸರ್ಕಾರದ ಪ್ಯೂನ್‌ಗಳ ವರ್ಗಾವಣೆಯನ್ನೂ ಪ್ರಧಾನಿ ಮೋದಿ ಮಾಡುತ್ತಾರೆ ಎಂದು ಅವರು ಪ್ರಧಾನಿಯವರನ್ನು ಪ್ರಶ್ನಿಸಿದರು.
ಬಿಜೆಪಿ ಇದನ್ನು ಏಕೆ ಮಾಡುತ್ತಿದೆ ಎಂದರೆ, ನಾವು 7-8 ವರ್ಷಗಳಲ್ಲಿ ಯಾವುದೇ ಅಧಿಕಾರವಿಲ್ಲದೆ ಮಾಡಿದ ಕೆಲಸವನ್ನು ಅವರು ಗುಜರಾತ್‌ನಲ್ಲಿ 30 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಮಾಡಲು ಸಾಧ್ಯವಾಗಲಿಲ್ಲ. ಮಣಿಪುರದಲ್ಲಿ ಅವರ ಸರ್ಕಾರವಿದೆ, ಅವರು ಮಣಿಪುರವನ್ನು ಸುಟ್ಟುಹಾಕಿದ್ದಾರೆ ಎಂದು ಕಿಡಿಕಾರಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw